ಕ್ರೀಡೆ

ಐಪಿಎಲ್‌ ಮಿನಿ ಹರಾಜಿಗೆ ಡೇಟ್‌ ಫಿಕ್ಸ್‌

ಐಪಿಎಲ್‌ 2023 ಹರಾಜು: ಟಿ20 ವಿಶ್ವಕಪ್​ ಶುರುವಾದ ಬೆನ್ನಲ್ಲೇ ಇತ್ತ ಬಿಸಿಸಿಐ ಐಪಿಎಲ್ (IPL 2023) ಸೀಸನ್ 16 ಗೆ ತಯಾರಿಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಐಪಿಎಲ್ 2023 ರ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಈ ವರ್ಷ ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ಆಟಗಾರರ ಹರಾಜು ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಟಿ20 ವಿಶ್ವಕಪ್ ಮುಕ್ತಾಯವಾಗಲಿದ್ದು, ಇದಾಗಿ ಒಂದು ತಿಂಗಳಲ್ಲೇ ಆಟಗಾರರ ಹರಾಜು ನಡೆಯಲಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಈ ಬಾರಿ ಐಪಿಎಲ್​ನಲ್ಲಿ ಡೀಲ್ ಕುದುರಿಸಿಕೊಳ್ಳುವ ಅವಕಾಶ ಆಟಗಾರರಿಗೆ ಇರಲಿದೆ.

ಮಿನಿ ಹರಾಜು:

ಈ ಬಾರಿ ಐಪಿಎಲ್​ನಲ್ಲಿ ಮಿನಿ ಹರಾಜು ನಡೆಯಲಿದೆ. ಕಳೆದ ಬಾರಿ ಮೆಗಾ ಹರಾಜು ನಡೆದಿರುವ ಹಿನ್ನಲೆಯಲ್ಲಿ ಈ ಸಲ ಆಯಾ ತಂಡವು ಬಿಡುಗಡೆ ಮಾಡುವ ಆಟಗಾರರ ಸ್ಥಾನಕ್ಕಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಬೇಕಾಗುತ್ತದೆ.

ಇತ್ತ ಟಿ20 ವಿಶ್ವಕಪ್ ಜರುಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳಿಗೆ ಆಟಗಾರರ ಫಾರ್ಮ್​ ಅನ್ನು ಕೂಡ ಗಣನೆಗೆ ತೆಗೆದುಕೊಳ್ಳಬಹುದು. ಈ ಮೂಲಕ ಯಾರನ್ನು ತಂಡದಲ್ಲೇ ಉಳಿಸಿಕೊಳ್ಳಬೇಕು ಮತ್ತು ಬಿಡುಗಡೆ ಮಾಡಬೇಕು ಎಂಬುದನ್ನು ನಿರ್ಧರಿಸಬಹುದು.

andolana

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

8 mins ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

13 mins ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

17 mins ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

22 mins ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago