ಐಪಿಎಲ್ 2023 ಹರಾಜು: ಟಿ20 ವಿಶ್ವಕಪ್ ಶುರುವಾದ ಬೆನ್ನಲ್ಲೇ ಇತ್ತ ಬಿಸಿಸಿಐ ಐಪಿಎಲ್ (IPL 2023) ಸೀಸನ್ 16 ಗೆ ತಯಾರಿಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಐಪಿಎಲ್ 2023 ರ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಈ ವರ್ಷ ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ಆಟಗಾರರ ಹರಾಜು ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಟಿ20 ವಿಶ್ವಕಪ್ ಮುಕ್ತಾಯವಾಗಲಿದ್ದು, ಇದಾಗಿ ಒಂದು ತಿಂಗಳಲ್ಲೇ ಆಟಗಾರರ ಹರಾಜು ನಡೆಯಲಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಈ ಬಾರಿ ಐಪಿಎಲ್ನಲ್ಲಿ ಡೀಲ್ ಕುದುರಿಸಿಕೊಳ್ಳುವ ಅವಕಾಶ ಆಟಗಾರರಿಗೆ ಇರಲಿದೆ.
ಮಿನಿ ಹರಾಜು:
ಈ ಬಾರಿ ಐಪಿಎಲ್ನಲ್ಲಿ ಮಿನಿ ಹರಾಜು ನಡೆಯಲಿದೆ. ಕಳೆದ ಬಾರಿ ಮೆಗಾ ಹರಾಜು ನಡೆದಿರುವ ಹಿನ್ನಲೆಯಲ್ಲಿ ಈ ಸಲ ಆಯಾ ತಂಡವು ಬಿಡುಗಡೆ ಮಾಡುವ ಆಟಗಾರರ ಸ್ಥಾನಕ್ಕಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಬೇಕಾಗುತ್ತದೆ.
ಇತ್ತ ಟಿ20 ವಿಶ್ವಕಪ್ ಜರುಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳಿಗೆ ಆಟಗಾರರ ಫಾರ್ಮ್ ಅನ್ನು ಕೂಡ ಗಣನೆಗೆ ತೆಗೆದುಕೊಳ್ಳಬಹುದು. ಈ ಮೂಲಕ ಯಾರನ್ನು ತಂಡದಲ್ಲೇ ಉಳಿಸಿಕೊಳ್ಳಬೇಕು ಮತ್ತು ಬಿಡುಗಡೆ ಮಾಡಬೇಕು ಎಂಬುದನ್ನು ನಿರ್ಧರಿಸಬಹುದು.
ಮಡಿಕೇರಿ: ಮಗನನ್ನು ಕಳೆದುಕೊಳ್ಳುವ ನೋವಿನ ನಡುವೆಯೂ, ಆತನ ಅಂಗಾಂಗಗಳು ಮತ್ತೊಬ್ಬರ ಬದುಕಿಗೆ ಆಸರೆಯಾಗಲಿ ಎಂದು ಕುಟುಂಬವೊಂದು ಮಾನವೀಯ ನಿರ್ಧಾರ ಕೈಗೊಂಡಿದೆ.…
ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ…
ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.…
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್ 11ರ ಮಧ್ಯಾಹ್ನ ದೇವಾಲಯದ…
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್ ಮಿಶ್ರಣ…
ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…