ಕ್ರೀಡೆ

ಆ್ಯಶಸ್ ಬಳಿಕ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ: ಡೇವಿಡ್​ ವಾರ್ನರ್​ ಸುಳಿವು!

ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಅವರು ವೈಟ್​​ ಬಾಲ್ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.
ಆತಿಥೇಯ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್‌ನಿಂದ ಬೇಗ ನಿರ್ಗಮಿಸಿದ ಬಳಿಕ ವಾರ್ನರ್ ಈ ಹೇಳಿಕೆ ನೀಡಿದ್ದಾರೆ. ‘ಬಹುಶಃ ನಾನು ಟೆಸ್ಟ್ ಕ್ರಿಕೆಟ್​ನಿಂದ ಮೊದಲ ದೂರ ಉಳಿಯಬಹುದು. ಮುಂಬರುವ 12 ತಿಂಗಳುಗಳು ನನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊನೆಯ ದಿನಗಳೂ ಆಗಬಹುದು. ಯಾಕೆಂದರೆ ಟಿ20 ವಿಶ್ವಕಪ್ ಟೂರ್ನಿಯು 2024 ಹಾಗೂ 2023ರಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಇದೆ’ ಎಂದು ಆಸ್ಟ್ರೇಲಿಯಾದ ಟಿವಿ ಕಾರ್ಯಕ್ರಮವೊಂದರಲ್ಲಿ ವಾರ್ನರ್ ಹೇಳಿದ್ದಾರೆ.ಇದೇ ವೇಳೆ, ನಾನು ವೈಟ್​​​ ಬಾಲ್ ಕ್ರಿಕೆಟ್​ನ್ನೂ ಪ್ರೀತಿಸುತ್ತೇನೆ, ಅದೊಂದು ಅದ್ಭುತ. 2024ರ ಟಿ20 ವಿಶ್ವಕಪ್​ನಲ್ಲೂ ಆಡಲು ಬಯಸುತ್ತೇನೆ ಎನ್ನುತ್ತಾರೆ ವಾರ್ನರ್​.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

46 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

57 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago