ಕ್ರೀಡೆ

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ ಲೆಕ್ಕಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ.

ಡೆಲಿ ತಂಡಕ್ಕೆ ಫಾಫ್‌ ಡುಪ್ಲೆಸಿಸ್‌ ಅವರ ಆಗಮನದಿಂದ ಬ್ಯಾಟಿಂಗ್‌ ಬಲ ಹೆಚ್ಚಾಗಿದೆ. ಜೊತೆಗೆ ಯುವ ಆಟಗಾರ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌, ಕರುಣ್‌ ನಾಯರ್‌, ಅಭಿಷೇಕ್‌ ಪೊರೆಲ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅವರು ಕೂಡ ಡೆಲ್ಲಿಗೆ ಬ್ಯಾಟಿಂಗ್‌ನಲ್ಲಿ ಶಕ್ತಿ ತುಂಬಬಲ್ಲರು. ಬೌಲಿಂಗ್‌ನಲ್ಲಿ ವೇಗಿ ಮಿಚೆಲ್‌ ಸ್ಟಾರ್ಕ್‌, ಟಿ.ನಟರಾಜನ್‌, ಮೋಹಿತ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಇದ್ದಾರೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌ ಹೊಣೆ ನಿಭಾಯಿಸಲಿದ್ದಾರೆ.

ಇತ್ತ ಲಖನೌ ತಂಡಕ್ಕೆ ರಿಷಭ್‌ ಪಂತ್‌ ನಾಯಕರಾಗಿ ತಂಡದ ಹೊಣೆ ಹೊತ್ತುಕೊಂಡಿದ್ದು, ಜೊತೆಗೆ ಡೇವಿಡ್‌ ಮಿಲ್ಲರ್‌, ಏಡನ್‌ ಮರ್ಕರಂ ಮತ್ತು ನಿಕೋಲಸ್‌ ಪೂರನ್‌ ಮಿಚೆಲ್‌ ಮಾರ್ಷ್‌ ಹಾಗೂ ಆಯುಷ್‌ ಬಡೋನಿ ಬ್ಯಾಟಿಂಗ್‌ ವಿಭಾಗದಲ್ಲಿದ್ದಾರೆ. ಆವೇಶ್‌ ಖಾನ್‌, ಆಕಾಶ್‌ ದೀಪ್‌ , ರವಿ ಬಿಷ್ನೋಯಿ ಮತ್ತು ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ ವಿಭಾಗದ ಹೊಣೆ ಹೊತ್ತುಕೊಂಡಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ

ಸ್ಥಳ: ಡಾ.ವೈ.ಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಸ್ಟೇಡಿಯಂ, ವಿಶಾಖಪಟ್ಟಣಂ

ನೇರ ಪ್ರಸಾರ: ಜಿಯೋಹಾಟ್‌ಸ್ಟಾರ್

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

10 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

11 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

12 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

15 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

15 hours ago