ಕ್ರೀಡೆ

ನನ್ನ ಈ ಪದಕವನ್ನು ನನ್ನ ತಾಯಿಗೆ ಅರ್ಪಿಸುತ್ತೇನೆ : ಬೆಳ್ಳಿ ಗೆದ್ದ ತುಲಿಕಾ ಮೊದಲ ಮಾತು

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.

 

“ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ ಈಗ ಏನನ್ನೂ ಮಾಡಲು ಸಾಧ್ಯವಿಲ್ಲ.ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಲು ಪ್ರಧಾನ್ ನರೇಂದ್ರ ಮೋದಿ ಅವರ ಸಹಾಯಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಬಯಸುತ್ತೇನೆ. ನಾನು ಈ ಪದಕವನ್ನು ನನ್ನ ತಾಯಿ ಮತ್ತು ತರಬೇತುದಾರರಿಗೆ ಅರ್ಪಿಸುತ್ತೇನೆ”

ಎಂದು ಹೇಳುವ ಮೂಲಕ ತಮ್ಮ ಮಾನದ ಮಾತನ್ನು ಹಂಚಿಕೊಂಡಿದ್ದಾರೆ.

ತುಲಿಕಾ ಮಾನ್ ಅವರು ಇಂದು ನಡೆದ ಜೂಡೋ ಸ್ಪರ್ಧೆಯಲ್ಲಿ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲೆಂಡಿನ ಅಡ್ಲಿಂಗ್ಟನ್ ಅವರನ್ನು ಸೋಲಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತಕ್ಕೆ ಜೂಡೋ ಆಟದಲ್ಲಿ ಇದು ಮೂರನೇ ಪದಕವಾಗಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತುಲಿಕಾ ಮಾನ್ ಅವರ ಗೆಲುವಿಗೆ ತಮ್ಮ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿ ವಿಶಿಷ್ಟ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತೊಂದು ಗೌರವವಾಗಿದೆ. ಆಕೆಯ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

2 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

3 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

22 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

23 hours ago