ಬೆಂಗಳೂರು – ದಕ್ಷಿಣ ಆಫ್ರಿಕಾದ ಮಾಜಿ ಸ್ಪೋಟಕ ಆಟಗಾರ ಎಬಿಡಿವಿಲಿಯರ್ಸ್ ಐಪಿಎಲ್‍ನ ಸರ್ವಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದು ವಿರಾಟ್ ಕೊಹ್ಲಿಗಿಂತ , ಮಹೇಂದ್ರ ಸಿಂಗ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.
16ನೇ ಆವೃತ್ತಿಯ ಐಪಿಎಲ್‍ನಲ್ಲಿ 226 ರನ್ ಗಳಿಸಿರುವ ವಿರಾಟ್ ಕೊಹ್ಲಿ, 2016ರಲ್ಲಿ 973 ರನ್ ಬಾರಿಸಿ ಒಂದೇ ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿ ಭಾಜನರಾಗಿದ್ದು, ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಆರ್ ಸಿ ಬಿ ವಿರುದ್ಧ ಅತಿ ಹೆಚ್ಚು ರನ್ ಗಳಿಸಿ ಐಪಿಎಲ್ ಟೂರ್ನಿಯಲ್ಲಿ 5 ಸಾವಿರಕ್ಕೂ ಹೆಚ್ಚು ರನ್ ಸಿಡಿಸಿರುವುದಲ್ಲದೆ 4 ಬಾರಿ ಸಿಎಸ್‍ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸಿದ್ದಾರೆ, ಈ ದಾಖಲೆಯನ್ನು ಆಧಾರಿಸಿಯೇ 360 ಬ್ಯಾಟರ್ ಎಬಿಡಿ ವಿಲಿಯರ್ಸ್ ತನ್ನ ಕುಚುಕು ವಿರಾಟ್ ಕೊಹ್ಲಿ ಅವರ ಬದಲಿಗೆ ಕೂಲ್ ಕ್ಯಾಪ್ಟನ್ ಧೋನಿಯನ್ನೇ ಶ್ರೇಷ್ಠ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.





