Mysore
22
broken clouds

Social Media

ಶುಕ್ರವಾರ, 11 ಜುಲೈ 2025
Light
Dark

ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ.

ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು ದಿನಗಳ ನಂತರ ಮೇ 31 ರಂದು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ತಮ್ಮ ಕೆಲಸವನ್ನು ಪುನರಾರಂಭಿಸಿದರು. ಎಪ್ರಿಲ್‌ನಿಂದ ಅವರು ಪ್ರತಿಭಟನೆ ನಡೆಸುತ್ತಿದ್ದರು.

ಸಾಕ್ಷಿ ಮಲಿಕ್ ಮತ್ತು ಪುನಿಯಾ ಇಬ್ಬರೂ ಪ್ರತಿಭಟನೆಯಿಂದ ಹಿಂದೆ ಸರಿಯುವ ವರದಿಗಳನ್ನು ನಿರಾಕರಿಸಿದ್ದಾರೆ. “ಇದು ನ್ಯಾಯಕ್ಕಾಗಿ ನಮ್ಮ ಹೋರಾಟ. ನಾವು ಹಿಂದೆ ಸರಿಯುವುದಿಲ್ಲ. ನಾವು ನಮ್ಮ ಭವಿಷ್ಯದ ಕಾರ್ಯತಂತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಕುಸ್ತಿಪಟುಗಳು ಶನಿವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದ್ದರು. ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿ, ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ ಎಂದು  ಕುಸ್ತಿಪಟುಗಳಿಗೆ ಹೇಳಿದ್ದಾರೆ.

ಶಾ ಅವರೊಂದಿಗೆ ಸಾಮಾನ್ಯ ಸಂಭಾಷಣೆಯನ್ನು ನಡೆಸಿದ್ದಾರೆ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ. ನಮ್ಮ ಬೇಡಿಕೆ ಒಂದೇ ಇದೆ. ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು. ನಮಗೆ ನ್ಯಾಯ ಸಿಗುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಐದು ದಿನಗಳ ಗಡುವು ಶನಿವಾರ ಕೊನೆಗೊಂಡ ನಂತರ ಪ್ರತಿಭಟನಾ ನಿರತ ಕುಸ್ತಿಪಟುಗಳು ಶಾ ಅವರನ್ನು ಭೇಟಿಯಾಗಲು ಕೋರಿದ್ದರು ಎಂದು ಮೂಲಗಳು ಹೇಳಿವೆ. .

ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧದ ತಮ್ಮ ಪ್ರತಿಭಟನೆಯನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿರುವ ಕುಸ್ತಿಪಟುಗಳು, ಕಳೆದ ತಿಂಗಳು ತಮ್ಮ ಪದಕಗಳನ್ನು ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಮುಳುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.ಆದಾಗ್ಯೂ, ರೈತ ಮುಖಂಡ ನರೇಶ್ ಟಿಕಾಯತ್ ಅವರ ಮಧ್ಯಸ್ಥಿಕೆಯ ನಂತರ ಅವರು ತಮ್ಮ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದರು.

ಈಗಾಗಲೇ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ. ಎರಡು ಎಫ್‌ಐಆರ್‌ಗಳಲ್ಲಿ, ಆರು ವಯಸ್ಕ ಕುಸ್ತಿಪಟುಗಳ ಸಂಯೋಜಿತ ದೂರುಗಳನ್ನು ಆಧರಿಸದ್ದು, ಪ್ರತ್ಯೇಕ ಒಂದು ಅಪ್ರಾಪ್ತ ವಯಸ್ಕ ಕುಸ್ತಿಪಟುವಿನ ತಂದೆಯ ದೂರನ್ನು ಆಧರಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!