ನವದೆಹಲಿ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹೋಗಿರುವ ಕುರಿತು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಮಣಿಪುರ ದ ಹಿಂಸಾಚಾರ ಕುರಿತು ಆ ಸ್ಥಳಕ್ಕೆ ಭೆಟಿ ನೀಡಲು ಪ್ರಧಾನಿ ಮೋದಿ ಅವರಿಗೆ ಸಮಯವಿಲ್ಲ. ಆದರೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ವೀಕ್ಷಣೆಗೆ ಅವರಿಗೆ ಸಮಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಪ್ರಧಾನ ಮಂತ್ರಿಯವರು ಅಹಮದಾಬಾದ್‌ನಲ್ಲಿರುವ ತಮ್ಮದೇ ಹೆಸರಿನ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಅವರು ನಾಳೆಯಿಂದ ಮತ್ತೆ ಕಾಂಗ್ರೆಸ್ ವಿರುದ್ಧ ನಿಂದಿಸಲು ಮತ್ತು ದೂರಲು ಶುರುಮಾಡುತ್ತಾರೆ. ಆದರೆ, ಉದ್ವಿಗ್ನತೆಯಿಂದ ಕೂಡಿರುವ ಮಣಿಪುರಕ್ಕೆ ಭೇಟಿ ನೀಡುವುದು ಸೂಕ್ತ ಎಂಬುದು ಅವರು ಅರ್ಥ ಮಾಡಿಕೊಂಡಿಲ್ಲ, ಇದರಿಂದ ಅವರ (ಮೋದಿ) ಆದ್ಯತೆ ಏನೆಂಬುದು ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ.
ಕಳೆದ 6 ತಿಂಗಳಿನಿಂದ ತಮಣಿಪುರದಲ್ಲಿ ಮೈಕೈ ಹಾಗೂ ಕುಕಿ ಬುಡಕಟ್ಟು ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಇದುವರೆಗೂ 175 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…