ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್ ಗೆ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದು, ಇದೀಗ ಹೊಸ ಎರಡು ಜವಾಬ್ದಾರಿಗಳೊಂದಿಗೆ ಆರ್ ಸಿಬಿ ಗೆ ಮತ್ತೆ ವಾಪಸ್ ಆಗುತ್ತಿದ್ದಾರೆ.
ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್ .ಸಿ.ಬಿಗೆ ಮರಳಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಈ ಬಗ್ಗೆ ಆರ್.ಸಿ.ಬಿ ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಲಾಗಿದೆ.