ಕ್ರೀಡೆ

ಐಪಿಎಲ್‌ನಿಂದ ಹೊರ ಬಿದ್ದ ಬಳಿಕ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಡಿಕೆ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ತನ್ನ ಪ್ರದರ್ಶನ ತೋರಲು ವಿಫಲವಾದ ಆರ್‌ಸಿಬಿ ಈ ಬಾರಿಯೂ ತನ್ನ ಕಪ್‌ ಗೆಲ್ಲುವ ಕನಸನ್ನು ಭಗ್ನಗೊಳಿಸಿದೆ. ಪ್ಲೇಆಫ್‌ಗೆ ಒಂದೇ ಮೆಟ್ಟಿಲು ಎಂಬಂತಿದ್ದ ಪಂದ್ಯದಲ್ಲಿ ಆರ್‌ಸಿಬಿ ಎಡವಿದರೂ ಈ ಪಂದ್ಯಾಕೂಟದ ಆರಂಭದಿಂದಲೂ ತನ್ನ ನಿರೀಕ್ಷಿತ ಮಟ್ಟದ ಆಟವನ್ನು ಪ್ರದರ್ಶಿಸುವಲ್ಲಿ ವಿಫಲವಾಗಿತ್ತು.

ಆರ್‌ಸಿಬಿ ಒಂದು ತಂಡವಾಗಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲವಾದರೂ ಆರ್‌ಸಿಬಿ ತಂಡದ ಬ್ಯಾಟ್ಸ್‌ಮ್ಯಾನ್‌ಗಳ ಪೈಕಿ ಪ್ರಚಂಡ ಫಾರ್ಮ್‌ನಲ್ಲಿದ್ದ ನಾಯಕ ಫಾಫ್‌, ಕೊಹ್ಲಿ ಮತ್ತು ಮ್ಯಾಕ್ಸಿ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಬಾರಿಯಾದರೂ ತಂಡ ಟ್ರೋಫಿ ಗೆಲ್ಲುವ ಕನಸು ಅಭಿಮಾನಿಗಳಲ್ಲಿ ಗರಿಗೆದರುವಂತೆ ಮಾಡಿದ್ದರು. ಬೌಲಿಂಗ್‌ ವಿಭಾಗದಲ್ಲಿ ಯಶಸ್ವಿ ಎನಿಸಿದ್ದು ಸಿರಾಜ್‌ ಮಾತ್ರ.

ಆದರೂ ತಂಡದ ಆಟಗಾರರ ಪೈಕಿ ಒಬ್ಬರಾಗಿರುವ ದಿನೇಶ್‌ ಕಾರ್ತಿಕ್‌ ಅವರು ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಡಿಕೆ ಅಭಿಮಾನಿಗಳಿಗೆ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಋತುವಿನಲ್ಲಿ ಆರ್‌ಸಿಬಿ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಡಿಕೆಯ ಬ್ಯಾಟ್‌ನಿಂದ ಸಿಡಿದಿದ್ದು ಕೇವಲ 140 ರನ್‌. ಸರಾಸರಿ ಕೇವಲ 11.67. ಮಿಡ್‌ ಆರ್ಡರ್‌ನಲ್ಲಿ ಸ್ಪೋಟಕ ಪ್ರದರ್ಶನ ನೀಡುವ ದಿನೇಶ್‌ ಕಾರ್ತಿಕ್‌ ಅವರ ಸತತ ವೈಫಲ್ಯವೇ ತಂಡಕ್ಕೆ ದೊಡ್ಡ ಹೊಡೆತ ನೀಡಿತ್ತು. ಪ್ಲೇ ಆಫ್‌ಗೂ ಹೆಜ್ಜೆಯಿಡದ ಆರ್‌ಸಿಬಿ ಟೂರ್ನಿಯಿಂದಲೇ ಹೊರಬಿದ್ದ ಬಳಿಕ ದಿನೇಶ್‌ ಕಾರ್ತಿಕ್‌ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್‌ ನಲ್ಲಿ ಬರೆದುಕೊಂಡಿರುವ ದಿನೇಶ್‌ ಕಾರ್ತಿಕ್‌ ʻನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ನಮ್ಮ ಪರವಾಗಿರಲಿಲ್ಲ. ಕನಸನ್ನು ತಲುಪಲು, ನಾವು ಅದನ್ನು ಮತ್ತಷ್ಟು ಅನುಸರಿಸುವುದನ್ನು ಮುಂದುವರಿಸುತ್ತೇವೆ. ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ನಮ್ಮೊಂದಿಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನೀವೇ ನಮಗೆ ಸಂಪೂರ್ಣ ಜಗತ್ತುʼ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

52 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

1 hour ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago