ಕ್ರೀಡೆ

ಭಾರತ ಈ ಬಾರಿ ವಿಶ್ವಕಪ್ ಗೆಲ್ಲೋದು ಅನುಮಾನ: ಯುವರಾಜ್ ಸಿಂಗ್!

ಬೆಂಗಳೂರು: ತವರಿನ ಅಂಗಣದಲ್ಲಿ ನಡೆಯಲಿರುವ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಎಂದು ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಆದರೆ ಮಧ್ಯಮ ಕ್ರಮಾಂಕವನ್ನು ಬಲಿಷ್ಠಗೊಳ್ಳದಿದ್ದರೆ ರೋಹಿತ್ ಶರ್ಮಾ ಪಡೆ ಚಾಂಪಿಯನ್ ಪಟ್ಟ ಅಲಂಕರಿಸುವುದು ಅನುಮಾನ ಎಂದು ಸಿಕ್ಸರ್ ಗಳ ಸರದಾರ ಯುವರಾಜ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ತನ್ನ ಅಭಿಯಾನ ಆರಂಭಿಸಿದರೆ, ಅಕ್ಟೋಬರ್ 15 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಪೈಪೋಟಿ ನಡೆಸಲಿದೆ. 2011ರಲ್ಲಿ ಎಂಎಸ್‌ ಧೋನಿ ನಾಯಕತ್ವದ ಭಾರತ ತಂಡಕ್ಕೆ ಟ್ರೋಫಿ ಗೆದ್ದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಆಲ್‌ರೌಂಡರ್‌ ಯುವರಾಜ್ ಸಿಂಗ್, ಯುಟ್ಯೂಬ್ ವಾಹಿನಿಯ ‘ಕ್ರಿಕೆಟ್ ಬಾಸು’ ಚಾನಲ್‌ನಲ್ಲಿ ಮಾತನಾಡಿ ಭಾರತದ ಟ್ರೋಫಿ ಗೆಲುವಿನ ಸಾಧ್ಯತೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಟ್ರೋಫಿ ಗೆಲ್ಲುವ ಬಗ್ಗೆ ಖಾತ್ರಿಯಿಲ್ಲ
ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಮುಕುಟ ಅಲಂಕರಿಸುವ ಕುರಿತು ಪ್ರಸ್ತಾಪಿಸಿರುವ ಯುವಿ, “ಒಬ್ಬ ಅಪ್ಪಟ ದೇಶಪ್ರೇಮಿಯಾಗಿ ನಾನು ಕೂಡ ಟೀಮ್ ಇಂಡಿಯಾ ಚಾಂಪಿಯನ್ಸ್‌ ಪಟ್ಟ ಅಲಂಕರಿಸುವುದನ್ನು ನೋಡಲು ಬಯಸುತ್ತೇನೆ. ಆದರೆ ಭಾರತ ತಂಡ ಟ್ರೋಫಿ ಗೆದ್ದೇ ಗೆಲ್ಲುತ್ತದೆ ಎಂದು ನಾನು ನಿಸ್ಸಂದೇಹವಾಗಿ ಹೇಳಲಾರೆ, ರೋಹಿತ್ ಶರ್ಮಾ ಪಡೆ ಪಂದ್ಯಗಳನ್ನು ಗೆಲ್ಲುತ್ತದೆ ಎಂದು ಹೇಳಬಲ್ಲೆ. ಅಂದಹಾಗೆ ಭಾರತ ತಂಡವು ಗಾಯಾಳುಗಳ ಸಮಸ್ಯೆ ಎದುರಿಸುತ್ತಿದ್ದು ಮಧ್ಯಮ ಕ್ರಮಾಂಕದಲ್ಲಿ ಸಾಕಷ್ಟು ಸಮಸ್ಯೆಗಳು ಗೋಚರಿಸುತ್ತಿದೆ. ಇದರಿಂದ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲೋದು ಅನುಮಾನ,” ಎಂದು ಯುವಿ ಹೇಳಿದ್ದಾರೆ.

ರೋಹಿತ್ ಶರ್ಮಾರಂತಹ ಪ್ರಬುದ್ಧ ನಾಯಕನನ್ನು ಟೀಮ್ ಇಂಡಿಯಾ ಹೊಂದಿದೆ. ಇನ್ನು ವಿಶ್ವಕಪ್‌ ಟೂರ್ನಿಯಲ್ಲಿ ಅವರಿಗೆ ಉತ್ತಮ ಆರಂಭಿಕ ಜೊತೆಗಾರನ ಅಗತ್ಯವಿದೆ. ಆ ಆಟಗಾರನೊಂದಿಗೆ ರೋಹಿತ್‌ ಸಾಕಷ್ಟು ಪಂದ್ಯಗಳನ್ನು ಆಡುವ ಅವಶ್ಯಕತೆ ಇದೆ. ವಿಶ್ವಕಪ್‌ಗಾಗಿ 20 ಆಟಗಾರರ ತಂಡ ರೂಪಿಸಿ ಎಂದು ಸಲಹೆ ನೀಡಿದ ಯುವರಾಜ್ ಸಿಂಗ್, ಆ ಬಳಿಕ ಕೆಲ ಪೂರ್ವಸಿದ್ಧತಾ ಪಂದ್ಯಗಳನ್ನು ಆಯೋಜಿಸಿ ಬಲಿಷ್ಠ 15 ಸದಸ್ಯರ ತಂಡವನ್ನು ಘೋಷಿಸಬೇಕೆಂದಿದ್ದಾರೆ.

ಮಧ್ಯಮ ಕ್ರಮಾಂಕ ಬಲಗೊಳ್ಳಬೇಕು
“ಟೀಮ್ ಇಂಡಿಯಾದ ಟಾಪ್ ಆರ್ಡರ್ ಸಾಕಷ್ಟು ಬಲಿಷ್ಠವಾಗಿದೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ನೂನ್ಯತೆಗಳು ಎದ್ದು ಕಾಣುತ್ತಿದೆ. ಟ್ರೋಫಿ ಗೆಲ್ಲಬೇಕಾದರೆ 4 ಮತ್ತು 5 ಕ್ರಮಾಂಕದ ಬ್ಯಾಟರ್‌ಗಳು ನಿರ್ಣಾಯಕ ಪಾತ್ರ ವಹಿಸಬೇಕು. ಉದಾಹರಣೆಗೆ ರಿಷಭ್ ಪಂತ್ ಅವರು ಐಪಿಎಲ್ ಟೂರ್ನಿಯಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದಾರೆ, ಟೀಮ್ ಇಂಡಿಯಾದಲ್ಲೂ ಅವರನ್ನು ಅದೇ ಕ್ರಮಾಂಕದಲ್ಲಿ ಆಡಿಸಬೇಕು. 4ನೇ ಕ್ರಮಾಂಕದ ಬ್ಯಾಟರ್ ರನ್ ಗಳಿಸುವುದನ್ನು ಮಾತ್ರ ಗುರಿಯಾಗಿಸಿಕೊಳ್ಳಬಾರದು. ಬದಲಿಗೆ ಒತ್ತಡ ನಿಭಾಯಿಸಿ ತಂಡಕ್ಕೆ ಗೆಲುವು ತಂದುಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು,” ಎಂದು ಯುವಿ ಸಲಹೆ ನೀಡಿದ್ದಾರೆ.

ರಿಂಕು ಸಿಂಗ್‌ಗೆ ಅವಕಾಶ ನೀಡಿ
ಮಧ್ಯಮ ಕ್ರಮಾಂಕದಲ್ಲಿ ತಮ್ಮ ಬ್ಯಾಟಿಂಗ್ ವೈಭವದಿಂದಲೇ ಭಾರತಕ್ಕೆ ಟಿ20, ಏಕದಿನ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಡಲು ಸಹಕರಿಸಿರುವ ಯುವರಾಜ್ ಸಿಂಗ್, ವಿಶ್ವಕಪ್ ಟೂರ್ನಿಯ ನಾಕೌಟ್ ಹಂತಗಳಲ್ಲಿ 4ನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಲು ಕನ್ನಡಿಗ ಕೆಎಲ್ ರಾಹುಲ್ ಹಾಗೂ ಯುವ ಆಟಗಾರ ರಿಂಕು ಸಿಂಗ್ ರಂತಹ ಸಮರ್ಥರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

“ರಿಂಕು ಸಿಂಗ್ ಅವರು ಅತ್ಯಮೋಘ ಬ್ಯಾಟಿಂಗ್ ಪ್ರದರ್ಶನ ತೋರುವ ಸಾಮರ್ಥ್ಯ ಹೊಂದಿದ್ದಾರೆ. ಉತ್ತಮ ಜೊತೆಯಾಟ ನೀಡುವ ಜೊತೆಗೆ ಒತ್ತಡ ಸಂದರ್ಭ ನಿಭಾಯಿಸಿ ತಂಡಕ್ಕೆ ಗೆಲುವು ತಂದುಕೊಡುವ ಜಾಣ್ಮೆ ಹೊಂದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೀವು ರಿಂಕು ಸಿಂಗ್ ರನ್ನು ಆಡಿಸಲು ಯೋಚಿಸಿದರೆ ಅವನಿಗೆ ಸಾಕಷ್ಟು ಪಂದ್ಯ ಆಡುವ ಅವಕಾಶ ನೀಡಬೇಕು,” ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

andolanait

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

17 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago