ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್ ಪೋಗಟ್ ಫೈನಲ್ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ 100ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ವಿನೇಶ್ ಒಲಿಪಿಂಕ್ಸ್‌ನಿಂದ ಅನರ್ಹಗೊಂಡಿದ್ದರು, ಈ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಅವರು ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ನಿವೃತ್ತಿ ಘೋಷಿಸಿ ಪೊಸ್ಟ್ ಮಾಡಿರುವ ಅವರು, ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತ ನನ್ನ ಧೈರ್ಯ ನೂಚ್ಚುನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. 2001 ರಿಂದ 2024 ರವರೆಗಿನ ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ, ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಖುಣಿಯಾಗಿರುತ್ತೇನೆ, ಕ್ಷಮಿಸಿ ಎಂದು ಬರೆದುಕೊಂಡಿದ್ದಾರೆ.





