ಕ್ರೀಡೆ

ಬಂಗಾರದ ಕನಸು ಭಗ್ನ: ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್‌ ಪೋಗಟ್ ಫೈನಲ್‌ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ 100ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ವಿನೇಶ್‌ ಒಲಿಪಿಂಕ್ಸ್‌ನಿಂದ ಅನರ್ಹಗೊಂಡಿದ್ದರು, ಈ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಅವರು ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ನಿವೃತ್ತಿ ಘೋಷಿಸಿ ಪೊಸ್ಟ್‌ ಮಾಡಿರುವ ಅವರು, ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತ ನನ್ನ ಧೈರ್ಯ ನೂಚ್ಚುನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. 2001 ರಿಂದ 2024 ರವರೆಗಿನ ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ, ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಖುಣಿಯಾಗಿರುತ್ತೇನೆ, ಕ್ಷಮಿಸಿ ಎಂದು ಬರೆದುಕೊಂಡಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

7 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

20 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

21 hours ago