ಕ್ರೀಡೆ

ದುಲೀಪ್‌ ಟ್ರೋಫಿ 2023: ಕೊನೆಗೂ ಪ್ರಶಸ್ತಿ ಬರ ನೀಗಿಸಿಕೊಂಡ ದಕ್ಷಿಣ ವಲಯ

ಬೆಂಗಳೂರು: ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್  ಪಂದ್ಯದಲ್ಲಿ ಪಶ್ಚಿಮ ವಲಯ ತಂಡವನ್ನು 75 ರನ್​ಗಳಿಂದ ಮಣಿಸಿದ ದಕ್ಷಿಣ ವಲಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಸರ್ಫರಾಜ್ ಖಾನ್, ಚೇತೇಶ್ವರ್ ಪೂಜಾರರಂತಹ ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದ ಪಶ್ಚಿಮ ವಲಯ ತಂಡ ಈ ಪಂದ್ಯದ ಗೆಲ್ಲುವ ಫೆವರೆಟ್ ಎನಿಸಿಕೊಂಡಿತ್ತು. ಆದರೆ ಕನ್ನಡಿಗ ವಿಧ್ವತ್ ಕಾವೇರಪ್ಪ (Vidhwath Kaverappa) ದಾಳಿಗೆ ನಲುಗಿದ ಪ್ರಿಯಾಂಕ್ ಪಾಂಚಾಲ್ ಪಡೆ ಸುಲಭವಾಗಿ ಸೋಲೊಪ್ಪಿಕೊಂಡಿತು.

ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ನೀಡಿದ 298 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಶ್ಚಿಮ ವಲಯ 222ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 75 ರನ್ ಗಳ ವಿರೋಚಿತ ಸೋಲು ಕಂಡಿತು.

ಮೊದಲ ಇನ್ನಿಂಗ್ಸ್​ನಲ್ಲೇ 67 ರನ್​ಗಳ ಹಿನ್ನಡೆ ಅನುಭವಿಸಿದ ಪಶ್ಚಿಮ ವಲಯ ತಂಡ ಎರಡನೇ ಇನ್ನಿಂಗ್ಸ್​ನಲ್ಲೂ ಮುಗ್ಗರಿಸಿತು.  ಆರಂಭಿಕ ಪೃಥ್ವಿ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ನಾಯಕನ ಇನ್ನಿಂಗ್ಸ್ ಆಡಿದ ಪ್ರಿಯಾಂಕ್ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿ 95 ರನ್ ಬಾರಿಸಿ ಔಟಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ 48 ರನ್ ಗಳಿಸಿದ್ದು ಬಿಟ್ಟರೆ,  ಸೂರ್ಯ ಕುಮಾರ್ 4 ರನ್ ಹಾಗೂ ಚೇತೇಶ್ವರ್ ಪೂಜಾರ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಅಂತಿಮವಾಗಿ ಪಶ್ಚಿಮ ವಲಯ ತಂಡ 222 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ 75 ರನ್​ಗಳ ಹೀನಾಯ ಸೋಲೊಪ್ಪಿಕೊಂಡಿತು. ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಕನ್ನಡಿಗ ವಿಧ್ವತ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

andolanait

Recent Posts

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

18 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

39 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

59 mins ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

2 hours ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

2 hours ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

2 hours ago