ಬೆಂಗಳೂರು : ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಜಯ ದಾಖಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಇರುವ ಅವರು ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.
“ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.” ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ ತಂಡ ಈ ವರ್ಲ್ಡ್ ಕಪ್ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಫೈನಲ್ ತಲುಪಿದೆ. ನವೆಂಬರ್ 19 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದೆ.





