Mysore
19
few clouds
Light
Dark

ಜು.6 ರಂದು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಸ್ಥಾನಕ್ಕೆ ಜುಲೈ 6 ರಂದು ಕೊನೆಗೂ ಚುನಾವಣೆ ನಡೆಸಲು ನಿರ್ದರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿರುವ ಚುನಾವಣಾಧಿಕಾರಿ ಮಹೇಶ್ ಮಿತ್ತಲ್ ಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನಿಂದ ಮಹೇಶ್ ಕುಮಾರ್ ಮಿತ್ತಲ್ ಕುಮಾರ್ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದ ಒಂದು ದಿನದ ಬಳಿಕ ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ.

ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಸಭೆಯ ನಂತರ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಜೂನ್ 30 ರೊಳಗೆ ಭಾರತೀಯ ಕುಸ್ತಿ ಒಕ್ಕೂಟಕ್ಕೆ ಚುನಾವಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದರು ಆದರೆ ಈ ಗಡುವಿನೊಳಗೆ ಚುನಾವಣೆ ನಡೆಸಲು ಕಷ್ಟವಾದ ಹಿನ್ನೆಲೆಯಲ್ಲಿ ಇದೀಗ ಜುಲೈ 6 ರಂದು ಚುನಾವಣೆ ನಿಗಧಿಯಾಗಿದೆ.

ಈ ಹಿಂದೆ ಡಬ್ಲ್ಯುಎಫ್‌ಐನಿಂದ ವಿಸರ್ಜಿಸಲ್ಪಟ್ಟ ಕೆಲವು ರಾಜ್ಯ ಸಂಸ್ಥೆಗಳು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಸಲಿವೆ ಎನ್ನಲಾಗಿದೆ ಅದರಲ್ಲಿ “ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಮತ್ತು ಕರ್ನಾಟಕದಲ್ಲಿ ಎರಡು ವಿಭಿನ್ನ ರಾಜ್ಯ ಸಂಸ್ಥೆಗಳು ಡಬ್ಲ್ಯುಎಫ್‌ಐ ಚುನಾವಣೆಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಕಳುಹಿಸಿವೆ ಎಂದು ಮೂಲಗಳು ತಿಳಿಸಿವೆ.

“ಭ್ರಷ್ಟಾಚಾರ ಮತ್ತು ದುರಾಡಳಿತ” ಸೇರಿದಂತೆ ವಿವಿಧ ಕಾರಣಗಳಿಗಾಗಿ ಕರ್ನಾಟಕ, ಹರಿಯಾಣ ಮತ್ತು ಮಹಾರಾಷ್ಟ್ರದ ಕುಸ್ತಿ ಒಕ್ಕೂಟದ ಕಾರ್ಯಕಾರಿ ಸಮಿತಿಯನ್ನು 2022ರ ಜೂನ್‌ನಲ್ಲಿ ಕಾರ್ಯಕಾರಿ ಸಮಿತಿಯನ್ನು ವಿಸರ್ಜನೆ ಮಾಡಲಾಗಿತ್ತು.

ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹವರ್ತಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವ ಠಾಕೂರ್ ಅವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳಾದ ಚಂಡೀಗಢ ಮತ್ತು ದೆಹಲಿ ಸೇರಿದಂತೆ ಭಾರತೀಯ ಕುಸ್ತಿ ಒಕ್ಕೂಟ 25 ಅಂಗಸಂಸ್ಥೆಗಳನ್ನು ಹೊಂದಿದೆ. ಪ್ರತಿ ರಾಜ್ಯ ಘಟಕ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು ಮತ್ತು ಪ್ರತಿ ಪ್ರತಿನಿಧಿ ಒಂದು ಮತ ಚಲಾಯಿಸಲು ಅರ್ಹತೆ ಪಡೆದಿದ್ಧಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ