ಕ್ರೀಡೆ

ಎಮರ್ಜಿಂಗ್ ಏಷ್ಯಾಕಪ್‌| ಭಾರತ-ಪಾಕ್ ನಡುವೆ ಫೈನಲ್ ಫೈಟ್: ನೇರ ಪ್ರಸಾರದ ಮಾಹಿತಿ ಇಲ್ಲಿದೆ

ಶ್ರೀಲಂಕಾ: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್‌ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಪಾಕ್ ತಂಡವನ್ನು ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಮಣಿಸಿತ್ತು.

ಆದರೆ ಸೆಮಿಫೈನಲ್​ನಲ್ಲಿ ಭರ್ಜರಿ ಕಂಬ್ಯಾಕ್ ಮಾಡುವ ಮೂಲಕ ಪಾಕಿಸ್ತಾನ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ. ಮೊದಲ ಸೆಮಿಫೈನಲ್​ನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪಾಕ್ ತಂಡವು 60 ರನ್​ಗಳಿಂದ ಜಯ ಸಾಧಿಸಿದರೆ ಫೈನಲ್​ಗೆ ಪ್ರವೇಶಿಸಿದೆ.

ಇತ್ತ ಟೀಮ್ ಇಂಡಿಯಾ ಕಿರಿಯರು ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶ್ ತಂಡವನ್ನು 51 ರನ್​ಗಳಿಂದ ಬಗ್ಗು ಬಡಿದು ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ರಿಯರ ಏಷ್ಯಾಕಪ್​ ಫೈನಲ್ ಪಂದ್ಯ ಯಾವಾಗ?

ಈ ಪಂದ್ಯವು ಭಾನುವಾರ, ಅಂದರೆ ಜುಲೈ 23 ರಂದು ಶ್ರೀಲಂಕಾದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.

ಭಾರತ-ಪಾಕಿಸ್ತಾನ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಶುರು?

ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ಆರಂಭವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು?

ಭಾರತ ಎ ವಿರುದ್ಧ ಪಾಕಿಸ್ತಾನ ಎ ನಡುವಣ ಫೈನಲ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್​ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಲೈವ್ ಸ್ಟೀಮಿಂಗ್ ವೀಕ್ಷಿಸುವುದು ಹೇಗೆ?

ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಎ ತಂಡ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್‌ಸಿನ್ಹ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.

ಪಾಕಿಸ್ತಾನ್ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ), ಒಮೈರ್ ಬಿನ್ ಯೂಸುಫ್, ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್ , ಸುಫಿಯಾನ್ ಮುಖೀಮ್ ಮತ್ತು ತಯ್ಯಬ್ ತಾಹಿರ್.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

6 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

7 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

8 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago