ಕ್ರೀಡೆ

ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳಿಗೆ ದಾಖಲಾದ ಪ್ಯಾರಿಸ್‌ ಒಲಿಂಪಿಕ್ಸ್‌

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ.

ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳು ದಾಖಲಾಗಿವೆ.

ಕಾರ್ಯಕ್ರಮದಲ್ಲಿ ಮುಂದಿನ 2028ರಲ್ಲಿ ಒಲಿಂಪಿಕ್ಸ್‌ ಕೂಟಕ್ಕೆ ಆತಿಥ್ಯ ವಹಿಸಲಿರುವ ಮನರಂಜನೆ ನಗರಿ ಲಾಸ್‌ ಏಂಜಲೀಸ್‌ಗೆ ಬಾವುಟವನ್ನು ಹಸ್ತಾಂತರಿಸಲಾಯಿತು. ಆತಿಥೇಯ ಫ್ರಾನ್ಸ್‌ನ ಈಜು ಚಾಂಪಿಯನ್‌ ಲಿಯೊ ಮಾರಷಾ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು.

ಈ ಬಾರಿ ಒಟ್ಟು 126 ಪದಕಗಳನ್ನು ಜಯಿಸಿದ ವಿಶ್ವದ ದೊಡ್ಡಣ್ಣ ಅಮೆರಿಕಾವು ತನ್ನ ದೇಶದ ಲಾಸ್‌ ಏಂಜಲೀಸ್‌ನಲ್ಲಿ ಮುಂದಿನ ಬಾರಿ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವುದು ಅತ್ಯಂತ ವಿಶೇಷವೆನಿಸಿದೆ.

ಈ ಬಾರಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ 200ಕ್ಕೂ ಹೆಚ್ಚು ದೇಶಗಳ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಪಣಕ್ಕಿಟ್ಟಿದ್ದರು. ಇಲ್ಲಿ ಪದಕ ಗೆದ್ದವರು ಸಂಭ್ರಮಿಸಿದರು. ಸೋತವರು ಮುಂದಿನ ಬಾರಿ ಜಯಿಸುವ ಕನಸಿನೊಂದಿಗೆ ತಮ್ಮ ತಮ್ಮ ದೇಶಗಳಿಗೆ ಮರಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

13 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

13 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

14 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

14 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

15 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

16 hours ago