ನವದೆಹಲಿ: ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಅಲೆಕ್ಸ್ ಹೇಲ್ಸ್ ಅವರು ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿದ್ದಾರೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಅಲೆಕ್ಸ್ ಹೇಲ್ಸ್ ಕೂಡ ಪ್ರಮುಖ ಪಾತ್ರವಹಿಸಿದ್ದರು.
ಆಸ್ಟ್ರೇಲಿಯಾ ಆತಿಥ್ಯದ 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜಾನಿ ಬೈರ್‌ಸ್ಟೋವ್ ಗಾಯಗೊಂಡು ತಂಡದಿಂದ ಹೊರ ಬಿದ್ದಿದ್ದರು. ಇವರ ಸ್ಥಾನಕ್ಕೆ ಬಂದಿದ್ದ ಅಲೆಕ್ಸ್ ಹೇಲ್ಸ್, ತಮ್ಮ ಸಿಡಿಲಬ್ಬರದ ಬ್ಯಾಟಿಂಗ್‌ನಿಂದ ಗಮನ ಸೆಳೆದಿದ್ದರು. ಜೋಸ್ ಬಟ್ಲರ್ ಜತೆ ಇನಿಂಗ್ಸ್ ಆರಂಭಿಸಿದ್ದ ಹೇಲ್ಸ್ ಕೂಡ ಪವರ್‌ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು.
https://www.instagram.com/p/CvhSNoYsWuH/
ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಅಜೇಯ 86 ರನ್ ಸಿಡಿಸಿದ್ದ ಅಲೆಕ್ಸ್ ಹೇಲ್ಸ್, ಇಂಗ್ಲೆಂಡ್ ತಂಡ ಫೈನಲ್‌ಗೇರಲು ನೆರವಾಗಿದ್ದರು. ಇನ್ನು ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿದ್ದ ಇಂಗ್ಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಒಟ್ಟಾರೆ ಈ ಟೂರ್ನಿಯಲ್ಲಿ ಹೇಲ್ಸ್, 212 ರನ್‌ಗಳನ್ನು ಕಲೆ ಹಾಕಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ ನಾಟಿಂಗ್‌ಹ್ಯಾಮ್ ಶೈರ್ ಪರ ದೇಶಿ ಕ್ರಿಕೆಟ್ ಹಾಗೂ ವಿಶ್ವದ ವಿವಿಧ ಫ್ರಾಂಚೈಸಿ ಲೀಗ್‌ಗಳಲ್ಲಿ ಆಡುವುದಾಗಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.
ಇಂಗ್ಲೆಂಡ್ ಪ್ರತಿನಿಧಿಸಿದ್ದಕ್ಕೆ ಹೆಮ್ಮೆಯಾಗಿದೆ: ಹೇಲ್ಸ್
“ಇಂಗ್ಲೆಂಡ್ ಜೆರ್ಸಿಯಲ್ಲಿ ನನ್ನ ವೃತ್ತಿ ಜೀವನದುದ್ದಕ್ಕೂ ಹಲವು ಏಳು-ಬೀಳುಗಳನ್ನು ಅನುಭವಿಸಿದ್ದೇನೆ. ಇದೊಂದು ಅಸಾಧಾರಣ ಪ್ರಯಾಣವಾಗಿದ್ದು, ಇಂಗ್ಲೆಂಡ್‌ಗಾಗಿ ನನ್ನ ಕೊನೆಯ ಪಂದ್ಯದಲ್ಲಿ ವಿಶ್ವಕಪ್ ಗೆದ್ದಿರುವುದು ನನಗೆ ತೃಪ್ತಿ ತಂದಿದೆ,” ಎಂದು ಬಲಗೈ ಬ್ಯಾಟ್ಸ್‌ಮನ್ ಹೇಳಿಕೊಂಡಿದ್ದಾರೆ.
2014ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯದಲ್ಲಿ 65 ಎಸೆತಗಳಲ್ಲಿ ಅಜೇಯ 116 ರನ್ ಸಿಡಿಸಿದ್ದ ಅಲೆಕ್ಸ್ ಹೇಲ್ಸ್ ದಾಖಲೆ ಬರೆದಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮೊದಲ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಇಲ್ಲಿಯವರೆಗೂ 70 ಏಕದಿನ ಪಂದ್ಯಗಳಿಂದ 2419 ರನ್, 75 ಟಿ20ಐ ಪಂದ್ಯಗಳಿಂದ 2074 ರನ್ ಹಾಗೂ 11 ಟೆಸ್ಟ್ ಪಂದ್ಯಗಳಿಂದ 573 ರನ್ ಬಾರಿಸಿರುವ ಅಲೆಕ್ಸ್ ಹೇಲ್ಸ್, ಎಲ್ಲಾ ಸ್ವರೂಪದಲ್ಲಿಯೂ 7 ಶತಕ ಹಾಗೂ 26 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…