Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಟಾಸ್‌ ಗೆದ್ದ ಇಂಗ್ಲೆಂಡ್‌ : ಫೀಲ್ಡಿಂಗ್‌ ಆಯ್ಕೆ

ಟಿ20 ವಿಶ್ವಕಪ್‌: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಇಂದು ಕಠಿಣ ಸವಾಲು ಎದುರಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿರುವ ದ್ವಿತೀಯ ಸೆಮೀಸ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ (India vs England) ಸೆಣೆಸಾಟ ನಡೆಸುತ್ತಿದೆ. ಇಲ್ಲಿ ಗೆದ್ದ ತಂಡ ಫೈನಲ್​ಗೇರಲಿದ್ದು ಪಾಕಿಸ್ತಾನ ಜೊತೆ ಪ್ರಶಸ್ತಿಗಾಗಿ ಕಾದಾಡಲಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ಪಡೆಗೆ ಇದೊಂದು ಅತ್ಯುತ್ತಮ ಅವಕಾಶ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ