ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಹೇಳಿದ್ದಾರೆ.
2011 ಹಾಗೂ 2019ರ ಒಡಿಐ ವಿಶ್ವಕಪ್ ಟ್ರೋಫಿ ಗೆದ್ದಾಗ ಇದಕ್ಕೆ ಮಹೇಂದ್ರ ಸಿಂಗ್ ಧೋನಿ ಹಾಗೂ ಬೆನ್ ಸ್ಟೋಕ್ಸ್ ಅವರೇ ಕಾರಣ ಎಂಬ ತಪ್ಪು ತಿಳುವಳಿಕೆ ಇತ್ತು. ಆದರೆ, ಭಾರತ ಹಾಗೂ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲುವುದರ ಹಿಂದೆ ತಂಡದ ಆಟಗಾರರ ಶ್ರಮವಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌ಮನ್ ತಿಳಿಸಿದ್ದಾರೆ.
2011ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಎಂಎಸ್ ಧೋನಿ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿ ವೇಗಿ ನುವಾನ್ ಕುಲಶೇಖರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ತಮ್ಮ ಅಜೇಯ 91 ರನ್‌ಗಳಿಂದಾಗಿ ಎಎಸ್ ಧೋಜಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಕ್ರಿಕೆಟ್ ಒಂದು ತಂಡದ ಆಟ: ತಮ್ಮದೇ ಆದ ಅಧಿಕೃತ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಿರುವ ವಿಡಿಯೋದಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ, ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ ಎಂಬುದನ್ನು ಜನರು ಮೊದಲು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
“ಕ್ರಿಕೆಟ್ ಒಂದು ಗುಂಪು ಆಟವಾಗಿದೆ. ಯಾವುದೇ ಒಬ್ಬ ಆಟಗಾರ ತನ್ನ ಪ್ರದರ್ಶನದಿಂದ ಮಾತ್ರ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವೇ ಇಲ್ಲ. ಆದರೆ, ಪ್ರಶಸ್ತಿ ಗೆಲ್ಲುವುದರ ಸಂಪೂರ್ಣ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡಿರುವುದನ್ನು ನಾನು ಸಾಮಾಜಿಕ ಜಾಲತಾಣಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭಾರತ ತಂಡ ವಿಶ್ವಕಪ್ ಗೆದ್ದಿದೆ ಎಂಬುದನ್ನು ನೆನಪಿಡಿ. ಅದನ್ನು ಮರೆತು ಬಿಡಬೇಡಿ. ಅದೇ ರೀತಿ 2019ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ಬೆನ್ ಸ್ಟೋಕ್ಸ್ ಒಬ್ಬರೇ ಟ್ರೋಫಿ ಗೆದ್ದಿಲ್ಲ, ಅದು ಇಡೀ ಇಂಗ್ಲೆಂಡ್ ತಂಡದ ಶ್ರಮವಾಗಿತ್ತು,” ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.
2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದ ಇಂಗ್ಲೆಂಡಡ ತಂಡ ಚೊಚ್ಚಲ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅಜೇಯ 84 ರನ್ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.
ಗೆಲುವಿನ ಹಿಂದೆ ಹಲವು ಸಂಗತಿಗಳಿರುತ್ತವೆ: ವಿಶ್ವಕಪ್ ಗೆಲುವಿನಲ್ಲಿ ಕೇವಲ ಕೆಲವೇ ಆಟಗಾರರು ಮಾತ್ರ ಕಾರಣರಾಗುವುದಿಲ್ಲ, ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳ ಶ್ರಮವೂ ಮುಖ್ಯವಾಗಿರುತ್ತದೆ ಎಂದು ಎಬಿ ಡಿ ವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.
“ವಿಶ್ವಕಪ್ ಗೆಲ್ಲಬೇಕೆಂದರೆ ಹಲವು ಸಂಗತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೋಚಿಂಗ್ ಸಿಬ್ಬಂದಿ, ಆಯ್ಕೆ ಮಂಡಳಿ, ಕಮಿಟಿ ಸದಸ್ಯರು, ನಿರ್ದೇಶಕರು, ಹೆಡ್ ಕೋಚ್, ಆಟಗಾರರು ಮತ್ತು ಮೀಸಲು ಆಟಗಾರರು ಎಲ್ಲರ ಶ್ರಮವೂ ಇರುತ್ತದೆ ಎಂಬುದು ನನ್ನ ಭಾವನೆ,” ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ತಿಳಿಸಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…