ಕ್ರೀಡೆ

ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ಫಾಫ್ ಡುಪ್ಲೆಸಿಸ್

IPL 2023 : ಉಭಯ ತಂಡಗಳು ಇದುವರೆಗೆ ಕೇವಲ 4 ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಇದರಲ್ಲಿ 3 ಬಾರಿ ಗುಜರಾತ್ ಟೈಟಾನ್ಸ್ ತಂಡವೇ ಗೆದ್ದಿದೆ.

ಐಪಿಎಲ್​ ಫೈನಲ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಉಭಯ ತಂಡಗಳು ಇದುವರೆಗೆ ಕೇವಲ 4 ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಇದರಲ್ಲಿ 3 ಬಾರಿ ಗುಜರಾತ್ ಟೈಟಾನ್ಸ್ ತಂಡವೇ ಗೆದ್ದಿದೆ. ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಣಿಸಿತ್ತು. ಹೀಗಾಗಿಯೇ ಫೈನಲ್ ಫೈಟ್​ನಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಇತ್ತ ಈ ಕುತೂಹಲವನ್ನು ತಣಿಸುವಂತೆ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಭವಿಷ್ಯ ನುಡಿದಿದ್ದಾರೆ. ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿದ ಡುಪ್ಲೆಸಿಸ್ ಈ ಬಾರಿ ಫೈನಲ್​ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಅದರಲ್ಲೂ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಗೆ ಸೋಲುಣಿಸಿರುವ ಸಿಎಸ್​ಕೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಡುಪ್ಲೆಸಿಸ್ ತಿಳಿಸಿದ್ದಾರೆ.

ಏಕೆಂದರೆ ಮಹೇಂದ್ರ ಸಿಂಗ್ ಧೋನಿ ಅವರ ಚಾಣಾಕ್ಷತೆ ಫೈನಲ್​ ಪಂದ್ಯದಲ್ಲಿ ವರ್ಕ್ ಆಗಲಿದೆ. ಹೀಗಾಗಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಕಪ್ ಗೆಲ್ಲಲಿದೆ ಎಂದು ಫಾಫ್ ಡುಪ್ಲೆಸಿಸ್ ತಿಳಿಸಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡ : ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ : ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

lokesh

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago