ಮುಂಬೈ : ಮಹಿಳಾ ಕ್ರಿಕೆಟ್ ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ನ.23 ರಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ ಶ್ರೀನಿವಾಸ್ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್ ಬಂದು ಶ್ರೀನಿವಾಸ್ ಅವರನ್ನು ಕರೆದುಕೊಂಡು ಹೋಗಿದೆ.
ಇದನ್ನು ಓದಿ: ಮದುವೆ ಸಂಭ್ರಮದಲ್ಕಿ ಕ್ರಿಕೆಟ್ ತಾರೆ ಮಂಧಾನ : ವಿಡಿಯೋ ಸಕತ್ ವೈರಲ್
ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅರಿಶಿನ ಶಾಸ್ತ್ರದ ವಿಡಿಯೋಗಳಿಂದ ಹಿಡಿದು ವಧು ಮತ್ತು ವರನ ತಂಡಗಳ ನಡುವಿನ ಸ್ನೇಹಪರ ಕ್ರಿಕೆಟ್ ಪಂದ್ಯದವರೆಗೆ, ಮದುವೆಗೆ ಮುನ್ನ ಹಲವು ಮನಮೋಹಕ ಕ್ಷಣಗಳು ಅನಾವರಣಗೊಂಡಿವೆ. ಹೊಸದಾಗಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಸ್ಮೃತಿ ಮತ್ತು ಪಲಾಶ್ ಇಬ್ಬರೂ ಅತ್ಯಂತ ಸುಂದರವಾಗಿ, ಸಂಪೂರ್ಣವಾಗಿ ಕೊರಿಯೋಗ್ರಾಫ್ ಮಾಡಿದ ನೃತ್ಯವನ್ನು ಪ್ರದರ್ಶಿಸಿದ್ದಾರೆ.
ಈ ಮೊದಲು, ಅರಿಶಿನ ಶಾಸ್ತ್ರದಲ್ಲಿ ಸ್ಮೃತಿ ಮತ್ತು ಪಲಾಶ್ ಇಬ್ಬರೂ ಖುಷಿಯಿಂದ ನೃತ್ಯ ಮಾಡಿದ್ದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಸಾಥ್ ನೀಡಿ, ವಧುವಿನ ತಂಡವಾಗಿ ಹೆಜ್ಜೆ ಹಾಕಿರುವ ದೃಶ್ಯಗಳು ಹೆಚ್ಚು ವೈರಲ್ ಆಗಿವೆ.
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…