ಕ್ರೀಡೆ

ಫಿಫಾ ವಿಶ್ವಕಪ್ : ಫೈನಲ್​ ತಲುಪಿದ ಅರ್ಜೆಂಟೀನಾ

ಅಲ್ ದಾಯೆನ್ (ಕತಾರ್): ಕತಾರ್​​ ಫಿಫಾ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್​ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.

ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್​ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್​ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್​ನ ಮೊದಲ ತಂಡವಾಗಿ ಪೈನಲ್​ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್​ ಆಡುತ್ತಿರುವ ಲಿಯೋನೆಲ್​ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್​ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್​ ಹಾದಿಯನ್ನು ಮುಚ್ಚಿ ಹಾಕಿತು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago