ಉತ್ತರ ಪ್ರದೇಶ : ವರ್ಲ್ಡ್ ಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್ ಮಾರ್ಷ್ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್ ದಾಖಲಾಗಿದೆ.
ಆರ್ ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ಮಿಚೆಲ್ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್ ಕಪ್ ಟ್ರೋಫಿ ಮೇಲೆ ಮಿಚೆಲ್ ಮಾರ್ಷ್ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ನವೆಂಬರ್ 19 ರಂದು ನಡೆದ ವರ್ಲ್ಡ್ ಕಪ್ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್ ಮಾರ್ಷ್, ವರ್ಲ್ಡ್ ಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಮಿಚೆಲ್ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.
ವೈರಲ್ ಆಗಿದ್ದ ಫೋಟೋದಲ್ಲಿ ಮಿಚೆಲ್ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್ ಅವರು ವರ್ಲ್ಡ್‌ಕಪ್ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್ ಅವರು ತಮ್ಮ ಪೊಸ್ಟನ್ನು ಡಿಲೀಟ್ ಮಾಡಿದ್ದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…