ಕ್ರೀಡೆ

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್‌ ಮಾರ್ಷ್‌ ವಿರುದ್ಧ ಎಫ್‌ಐಆರ್‌

ಉತ್ತರ ಪ್ರದೇಶ : ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದ ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಮೇಲೆ ಉತ್ತರ ಪ್ರದೇಶದ ಆಲಿಗಢದಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆರ್ ಟಿಐ ಕಾರ್ಯಕರ್ತ ಪಂಡಿತ್‌ ಕೇಶವ್‌ ಅವರು ಮಿಚೆಲ್‌ ವಿರುದ್ಧ ದೂರು ದಾಖಲಿಸಿದ್ದು,ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಮಿಚೆಲ್‌ ಮಾರ್ಷ್‌ ಅವರು ಕಾಲಿಟ್ಟು ಕುಳಿತದ್ದು ಭಾರತೀಯ ಕ್ರಿಕೆಟ್‌ ತಂಡದ ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಮಾರ್ಷ್‌ ಅವರಿಗೆ ನಮ್ಮ ದೇಶದಲ್ಲಿ ಕ್ರಿಕೆಟ್‌ ಆಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದು,ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ನವೆಂಬರ್‌ 19 ರಂದು ನಡೆದ ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು.ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿದ್ದದ್ದು ಜನರ ಗೆಂಗಣ್ಣಿಗೆ ಗುರಿಯಾಗಿತ್ತು. ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಮಿಚೆಲ್‌ ಅವರ ನಡೆಯನ್ನು ಜನ ತೀವ್ರವಾಗಿ ಖಂಡಿಸಿ, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.

ವೈರಲ್‌ ಆಗಿದ್ದ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದರು. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago