ನವದೆಹಲಿ: ಸದ್ಯ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ಇಚ್ಛಿಸಿದ್ದು, ನನ್ನ ಮುಂದಿನ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ವಹಿಸಲು ಇಚ್ಛಿಸುವುದಾಗಿ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಉಳಿದು, ಕ್ರಿಕೆಟ್ ಕಡೆ ಹೆಚ್ಚಿನ ಗಮನ ಕೇಂದ್ರಿಕರಿಸುವ ಬಗ್ಗೆ ತಮ್ಮ ಬೆಂಬಲಿಗರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ʼಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡುತ್ತೇನೆ, ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಕ್ರಿಕೆಟ್‌ನತ್ತ ಹೆಚ್ಚಿನ ಗಮನ ಕೇಂದ್ರಿಕರಿಸಲು ಅವಕಾಶ ನೀಡಿ ಎಂದಿದ್ದಾರೆ. ಹಾಗೂ ಪಕ್ಷದಿಂದ ಜನ ಸೇವೆಗೆ ಅವಕಾಶ ಮಾಡಿಕೊಟ್ಟ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಜೈ ಹಿಂದ್ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
2011 ರ ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಗಂಭೀರ್, ರಾಜಕೀಯಕ್ಕೆ ಸೇರ್ಪಡೆಗೊಂಡ ಬಳಿಕ 2019 ರಲ್ಲಿ ಪೂರ್ವ ದಿಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರು 6,95,109 ಮತಗಳನ್ನು ಪಡೆಯುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು.
ಈ ಬಾರಿಯ ಚನಾವಣೆಯಲ್ಲಿ ಗಂಭೀರ್ ಅವರಿಗೆ ಟಿಕೆಟ್ ಸಿಗವುದು ಅನುಮಾನ ಎಂದು ಊಹಾಪೋಹಗಳು ಹರಡಿದ ಬೆನ್ನಲ್ಲೇ ಇವರು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…