SYDNEY, AUSTRALIA: Glenn McGrath poses with the ICC World Cup trophy at the Australian World Cup team breakfast at the Sydney Cricket Ground Members Dining Room 03 May 2007. The Australian World Cup team returned home from the West Indies following their victory in the ICC Cricket World Cup Final against Sri Lanka on April 28. AFP PHOTO / POOL (Photo credit should read corey davis/AFP/Getty Images)
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್ ಮೆಗ್ರಾಥ್ ಅವರು, ಸೆಮಿಫೈನಲ್ ತಲುಪಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.
ಇತ್ತೀಚೆಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದ ಗ್ಲೆನ್ ಮೆಗ್ರಾಥ್, ಈ ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಳನ್ನು ಆರಿಸಿದ್ದಾರೆ. ಆತಿಥೇಯ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಅಂತಿಮ ನಾಲ್ಕರಲ್ಲಿ ಪ್ರವೇಶ ಪಡೆಯಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಸೆಮಿಫೈನಲ್ಸ್ ಪ್ರವೇಶಿಸಬಲ್ಲ ನಾಲ್ಕು ತಂಡಗಳ ಪೈಕಿ ಆಸ್ಟ್ರೇಲಿಯಾ ಕೂಡ ಇರಲಿದೆ ಎಂಬುದರಲ್ಲಿ ನನಗೆ ಯಾವುದೇ ಅಚ್ಚರಿ ಇಲ್ಲ. ನಿಸ್ಸಂಶವಾಗಿ ಭಾರತ ತಂಡ ತನ್ನ ತವರು ನೆಲದಲ್ಲಿ ಆಡುತ್ತಿದೆ. ಇಂಗ್ಲೆಂಡ್ ತಂಡ ಅತ್ಯುತ್ತಮ ಕ್ರಿಕೆಟ್ ಆಡುತ್ತಿದೆ ಹಾಗೂ ಪಾಕಿಸ್ತಾನ ಕೂಡ ಅದ್ಭುತ ಪ್ರದರ್ಶನ ತೋರುತ್ತಿದೆ. ಈ ಮೇಲಿನ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿವೆ,” ಎಂದು ಮೆಗ್ರಾಥ್ ಭವಿಷ್ಯ ನುಡಿದಿದ್ದಾರೆ.
ಜಸ್‌ಪ್ರೀತ್ ಬುಮ್ರಾ ಕೀ ಪ್ಲೆಯರ್ ಎಂದ ಮೆಗ್ರಾಥ್ : ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಇಲ್ಲಿಯವೆರಗೂ ಜಸ್‌ಪ್ರೀತ್ ಬುಮ್ರಾ ಗಾಯದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇದೀಗ ಅವರು ಸಂಪೂರ್ಣ ಫಿಟ್‌ನೆಸ್‌ಗೆ ಮರಳಿದ್ದು, ಐರ್ಲೆಂಡ್ ವಿರುದ್ಧ ಮುಂಬರುವ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಅವರ ಫಿಟ್ನೆಸ್ ಪರೀಕ್ಷೆ ನಡೆಯಲಿದೆ. ಭಾರತೀಯ ಪಿಚ್‌ಗಳಲ್ಲಿ ಬುಮ್ರಾ ಅದ್ಬುತ ಪ್ರದರ್ಶನ ತೋರುತ್ತಾರೆ. ಇವರು ಪುಟಿದರೆ ಭಾರತ ತಂಡ ವಿಶ್ವದ ಎಲ್ಲಾ ಕಡೆ ಜಯಿಸಲಿದೆ ಎಂದು ಮೆಗ್ರಾಥ್ ತಿಳಿಸಿದ್ದಾರೆ.
“ಫಾಸ್ಟ್ ಬೌಲರ್‌ಗಳಿಗೆ ಭಾರತದ ಪಿಚ್‌ಗಳು ಅತ್ಯಂತ ಕಠಿಣವಾಗಿವೆ. ಬೌಲರ್‌ಗಳಿಗೆ ಇಲ್ಲಿ ಉತ್ತಮ ಪ್ರದರ್ಶನ ತೋರುವುದು ಸುಲಭವಲ್ಲ. ಆದರೆ, ಭಾರತದಿಂದ ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ವೇಗದ ಬೌಲರ್‌ಗಳನ್ನು ನಾವು ಹಿಂದೆಂದೂ ನೋಡಿರಲಿಲ್ಲ. ಏಕೆಂದರೆ ಮೊದಲು ಇಲ್ಲಿ ವೇಗದ ಬೌಲರ್‌ಗಳು ಕೇಂದ್ರಿಕೃತವಾಗಿರಲಿಲ್ಲ. ಇಲ್ಲಿ ಯಶಸ್ವಿಯಾಗುವ ವೇಗದ ಬೌಲರ್ ವಿಶ್ವದ ಎಲ್ಲಾ ಕಡೆ ಯಶಸ್ವಿಯಾಗುತ್ತಾರೆ,” ಎಂದು ಗ್ಲೆನ್ ಮೆಗ್ರಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಆರಂಭ : ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಆರಂಭವಾಗಲಿದೆ. ಇದೇ ಮೊದಲ ಬಾರಿ ಭಾರತದ ಪೂರ್ಣ ಪ್ರಮಾಣದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ನವೆಂಬರ್ 19 ರಂದು ಫೈನಲ್ ಮೂಲಕ ಟೂರ್ನಿಗೆ ತೆರೆ ಬೀಳಲಿದೆ. ಇದಕ್ಕೂ ಮುನ್ನ 2011ರಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಜೊತೆ ಭಾರತ ಜಂಟಿಯಾಗಿ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿತ್ತು.
ರೌಂಡ್‌ರಾಬಿನ್ ಲೀಗ್ ಪಂದ್ಯಗಳು : ಏಕದಿನ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದೆ. ಹೈದರಾಬಾದ್, ಅಹಮದಾಬಾದ್, ಧರ್ಮಶಾಲಾ, ದಿಲ್ಲಿ, ಚೆನ್ನೈ, ಲಖನೌ, ಪುಣೆ, ಬೆಂಗಳೂರು, ಮುಂಬೈ ಹಾಗೂ ಕೋಲ್ಕತಾದಲ್ಲಿ ಪಂದ್ಯಗಳು ನಡೆಯಲಿವೆ. ಮುಂಬೈ ಹಾಗೂ ಕೋಲ್ಕತಾದಲ್ಲಿ ಸೆಮಿಫೈನಲ್ಸ್ ಪಂದ್ಯಗಳು ನಡೆಯಲಿವೆ. ಇನ್ನು ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…