ಕ್ರೀಡೆ

IPL 2024: KKR vs SRH ನಡುವಿನ ಫೈನಲ್‌ ಪಂದ್ಯಕ್ಕೆ ವಿಶೇಷ ಡೂಡಲ್‌ ಹಂಚಿಕೊಂಡ ಗೂಗಲ್‌

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರಿಡಾಂಗಣದಲ್ಲಿ ಇಂದು ನಡೆಯಲಿರುವ 17ನೇ ಐಪಿಎಲ್‌ ಸೀಸನ್‌ನ ಫೈನಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದ ತಂಡಗಳು ಮೂರನೇ ಬಾರಿ ಐಪಿಎಲ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಇನ್ನು ಈ ಫೈನಲ್‌ ಪಂದ್ಯಕ್ಕೆ ಗೂಗಲ್‌ ತನ್ನ ಡೂಡಲ್‌ ಮೂಲಕ ವಿಶೇಷ ಶುಭಾಷಯ ಕೋರಿರುವ ಡೂಡಲ್‌ನನ್ನು ಹಂಚಿಕೊಂಡಿದೆ. ಇದರಲ್ಲಿ ಬ್ಯಾಟ್‌ ಬಾಲ್‌ ಮತ್ತು ಸ್ಟಂಪ್ಸ್‌ಗಳನ್ನು ನಾವು ಕಾಣಬಹುದಾಗಿದೆ. ಜತೆಗೆ ಡೂಡಲ್‌ನ ಎರಡು ಬದಿಗಳಲ್ಲಿ ಎಸ್‌ಆರ್‌ಎಚ್‌ ಮತ್ತು ಕೆಕೆಆರ್‌ ತಂಡದ ಅಭಿಮಾನಿಗಳು ಹುರಿದುಂಬಿಸುತ್ತಿರುವುದನ್ನು ಕಾರ್ಟೂನ್‌ ಮೂಲಕ ಗೂಗಲ್‌ ತನ್ನ ಮುಖಪುಟಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದಾಗಿದೆ.

ಇನ್ನು ಇಂದು ನಡೆಯುವ ಫೈನಲ್‌ ಫೈಟ್‌ಗೆ ಮುನ್ನಾ ಕೆಕೆಆರ್‌ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ಎಸ್‌ಆರ್‌ಎಚ್‌ ನಾಯಕ ಪ್ಯಾಟ್‌ ಕಮಿನ್ಸ್‌ ಅವರು ಭರ್ಜರಿ ಫೋಟೋಶೂಟ್‌ ನಡೆಸಿದ್ದಾರೆ.

ಈ ಬಗ್ಗೆ iplt20 ಇನ್ಸ್ಟಾಗ್ರಾಂ ಖಾತೆಯಲ್ಲಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದಕ್ಕೆ ಟೂ ಕ್ಯಾಪ್ಟನ್‌ ಒನ್‌ ಟ್ರೋಫಿ, ಎಲ್ಲರ ದೃಷ್ಠ ಫೈನಲ್‌ ಪಂದ್ಯದ ಮೇಲೆ ಎಂದು ಬರೆದುಕೊಂಡಿದ್ದಾರೆ.

https://www.instagram.com/p/C7Y824kt_n3/?igsh=Y2tjaXY3d3E2Mnhz&img_index=1

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

16 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

22 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

40 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

1 hour ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

2 hours ago