ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.
ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್ಗೆ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಭರ್ಜರಿ 8 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೆ ತಲುಪಿದರೂ ಸಹ ಆರ್ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್ ಭವಿಷ್ಯ ನಿಂತಿದೆ.
ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.
ಹೈದರಾಬಾದ್ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್ ಮತ್ತು 8 ಸಿಕ್ಸ್ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.
ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…