ಕ್ರೀಡೆ

ಪಂಜಾಬ್‌ ಕಿಂಗ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ಗೆಲುವು

ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 37ನೇ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಆಲ್‌ಔಟ್‌ ಆಗಿ ಗುಜರಾತ್‌ ಟೈಟನ್ಸ್‌ ತಂಡಕ್ಕೆ ಗೆಲ್ಲಲು 143 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಗುಜರಾತ್‌ ಟೈಟನ್ಸ್‌ 19.1 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 146 ರನ್‌ ಕಲೆಹಾಕಿತು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಸಾಮ್‌ ಕರನ್‌ ಹಾಗೂ ಪ್ರಭ್‌ಸಿಮ್ರಾನ್ ಸಿಂಗ್‌ ಕಣಕ್ಕಿಳಿದರು. ಪ್ರಭ್‌ಸಿಮ್ರಾನ್‌ ಸಿಂಗ್‌ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್‌ಮನ್ ಸಹ ಮೂವತ್ತರ ಗಡಿ ದಾಟದೇ ಗುಜರಾತ್‌ ಟೈಟನ್ಸ್‌ ಬೌಲಿಂಗ್‌ ದಾಳಿಗೆ ಮಂಕಾದರು. ಸಾಮ್‌ ಕರನ್‌ 20 (19) ರನ್‌ ಗಳಿಸಿದರೆ, ಪ್ರಭ್‌ಸಿಮ್ರಾನ್‌ ಸಿಂಗ್‌ 35 (21) ರನ್‌ ಗಳಿಸಿದರು. ಇನ್ನುಳಿದಂತೆ ರಿಲೇ ರೊಸ್ಸೊ 9 (7) ರನ್‌, ಜಿತೇಂದ್ರ ಶರ್ಮಾ 13 (12) ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 6 (9) ರನ್‌, ಶಶಾಂಕ್‌ ಸಿಂಗ್‌ 8 (12) ರನ್‌, ಅಶುತೋಷ್‌ ಶರ್ಮಾ 3 (8) ರನ್‌, ಹರ್‌ಪ್ರೀತ್‌ ಸಿಂಗ್‌ 14 (19) ರನ್‌, ಹರ್‌ಪ್ರೀತ್‌ ಬ್ರಾರ್‌ 29 (12) ರನ್‌, ಹರ್ಷಲ್‌ ಪಟೇಲ್‌ ಗೋಲ್ಡನ್‌ ಡಕ್‌ಔಟ್‌ ಮತ್ತು ಕಗಿಸೊ ರಬಾಡಾ ಅಜೇಯ 1 (1) ರನ್‌ ಗಳಿಸಿದರು.

ಗುಜರಾತ್‌ ಟೈಟನ್ಸ್‌ ಪರ ಸಾಯಿ ಕಿಶೋರ್‌ 4 ವಿಕೆಟ್‌, ನೂರ್‌ ಅಹ್ಮದ್‌ ಹಾಗೂ ಮೋಹಿತ್ ಶರ್ಮಾ ತಲಾ ಎರಡೆರಡು ವಿಕೆಟ್‌ ಮತ್ತು ರಶೀದ್‌ ಖಾನ್‌ 1 ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 13 (11) ರನ್‌ ಹಾಗೂ ನಾಯಕ ಶುಭ್‌ಮನ್‌ ಗಿಲ್‌ 35 (29) ರನ್‌ ಗಳಿಸಿದರು. ಇನ್ನುಳಿದಂತೆ ಸಾಯಿ ಸುದರ್ಶನ್‌ 31 (34) ರನ್‌, ಡೇವಿಡ್‌ ಮಿಲ್ಲರ್‌ 4 (6) ರನ್‌, ಅಜ್ಮತ್‌ಉಲ್ಲಾ ಒಮರ್ಜೈ 13 (10) ರನ್‌, ಶಾರುಖ್‌ ಖಾನ್‌ 8 (4) ರನ್‌, ರಶೀದ್‌ ಖಾನ್‌ 3 (3) ರನ್‌ ಗಳಿಸಿದರು ಮತ್ತು ಯಾವುದೇ ಎಸೆತ ಎದುರಿಸದ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ ಅಜೇಯರಾಗಿ ಉಳಿದರು. ತಂಡದ ಪರ ಕೊನೆಯ ಹಂತದವರೆಗೂ ಹೋರಾಡಿದ ರಾಹುಲ್‌ ತೆವಾಟಿಯಾ ಅಜೇಯ 36 (18) ರನ್‌ ಗಳಿಸಿದರು.

ಪಂಜಾಬ್‌ ಕಿಂಗ್ಸ್‌ ಪರ ಹರ್ಷಲ್‌ ಪಟೇಲ್‌ 3 ವಿಕೆಟ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 2 ವಿಕೆಟ್‌, ಸಾಮ್ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

3 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

6 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

6 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 hours ago