ಮುಂಬೈ : ಭಾರತ ಪರವಾಗಿ 3 ಅಂತರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿರುವ ಬಲಗೈ ದಾಂಡಿಗ ಗುರ್ಕೀರತ್ ಸಿಂಗ್ ಮಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. 2016ರಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯಲ್ಲಿ ಅವರು ಆಡಿದ್ದರು.
ಪಂಜಾಬ್ ತಂಡದ ಪರವಾಗಿ ಆಡುತ್ತಿದ್ದ ಬಲಗೈ ಬ್ಯಾಟರ್ ಶುಕ್ರವಾರ ತಾವು ನಿವೃತ್ತರಾಗುತ್ತಿರುವ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ನನ್ನ ಅಮೋಘ ಕ್ರಿಕೆಟ್ ಪಯಣಕ್ಕೆ ಇಂದು ನಾನು ಕೊನೆಯನ್ನು ಘೋಷಿಸುತ್ತಿದ್ದೇನೆ. ಭಾರತದ ಪರವಾಗಿ ಆಡಿರುವುದು ನನ್ನ ಭಾಗ್ಯವಾಗಿತ್ತು ಎಂದು ತಮ್ಮ ವಿದಾಯದ ಕುರಿತು ವಿವರಿಸಿದ್ದಾರೆ.
2016ರಲ್ಲಿ ಭಾರತ ಪರವಾಗಿ ಆಡಿದ್ದ ಅವರು, 2021-22ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಗರಿಷ್ಠ ರನ್ ಗಳಿಸಿದ್ದರು. ಇನ್ನೂ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದರು. ಅವರು ಕೊನೆಯದಾಗಿ 2020ರ ಐಪಿಎಲ್ ಋತುವಿನಲ್ಲಿ ಆಡಿದ್ದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…