ನವದೆಹಲಿ: ಡೋಪಿಂಗ್ ಟೆಸ್ಟ್ನಲ್ಲಿ ಅನುತ್ತೀರ್ಣರಾಗಿ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, “ನಾನು ವೃತ್ತಿ ಜೀವನಕ್ಕಾಗಿ ನಡೆಸಿದ ಸುದೀರ್ಘ ಯುದ್ಧದಲ್ಲಿ ಒಂದನ್ನು ಕೊನೆಗೊಳಿಸಿದ್ದೇನೆ. 2021ರಲ್ಲಿ ನನ್ನ ಡೋಪಿಂಗ್ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ನನ್ನ ಅರಿವಿಗೆ ಬಾರದೇ ನಿಷೇಧಿತ ಪದಾರ್ಥವನ್ನು ಸೇವಿಸಿದ್ದೆ. ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ನನ್ನ ದೇಹ ಸೇರಿದ ನಿಷೇಧಿತ ವಸ್ತುವಿನ ಮೂಲ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.”
ಈ ವಿಷಯ ಸೌಹಾರ್ದಯುತವಾಗಿ ಬಗೆಹರಿದಿರುವುದು ನನಗೆ ಸಂತಸ ತಂದಿದೆ. ನನ್ನ ಅಮಾನತು ಅವಧಿಯನ್ನು 3 ತಿಂಗಳು ಕಡಿಮೆ ಮಾಡಲಾಗಿದೆ. ಜುಲೈ 2023ರಲ್ಲಿ ನಾನು ಇಷ್ಟಪಡುವ ಕ್ರೀಡೆಗೆ ಮತ್ತೆ ಮರಳಲು ಅವಕಾಶವಿದೆ. ಆದರೆ ನಿಷೇಧಿತ ಪದಾರ್ಥಗಳು ನನ್ನ ದೇಹವನ್ನು ಹೇಗೆ ಪ್ರವೇಶಿಸಿದವು ಎಂಬುದು ತಿಳಿಯದಿರುವುದು ದುಃಖ ತರಿಸಿದೆ. ನನ್ನ ವೃತ್ತಿಜೀವನದಲ್ಲಿ ಎಂದಿಗೂ ಅಂತಹ ವಸ್ತುಗಳನ್ನು ಸೇವಿಸುವ ಆಲೋಚನೆಯೇ ನನಗೆ ಬಂದಿರಲಿಲ್ಲ. ಜಿಮ್ನಾಸ್ಟಿಕ್ ನನ್ನ ರಕ್ತದಲ್ಲಿದೆ. ನಾನು ದೇಶಕ್ಕೆ ಅಪಖ್ಯಾತಿ ತರುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…