ನವದೆಹಲಿ: ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಭೂಗಿಲೆದ್ದಿದ್ದ ಹಲವಾರು ಊಹಾಪೋಹಗಳಿಗೆ ಮಾಜಿ ಸ್ಪಿನ್ನರ್ ಹರಭಜನ್ ಸಿಂಗ್ ಉತ್ತರ ನೀಡಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಟಿ20ಗೆ ನಿವೃತ್ತಿ ಘೋಷಸಿದ ಬಳಿಕ ಅವರು ಏಕದಿನ ಮಾದರಿಯಲ್ಲಿಯೂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಊಹಾಪೋಹಗಳು ಹರದಾಡುತ್ತಿದ್ದವು.
ಈ ಎಲ್ಲಾ ಪ್ರಶ್ನೆಗಳಿಗೂ ಪಿಟಿಐ ಸಂದರ್ಶನದಲ್ಲಿ ಉತ್ತರ ನೀಡಿರುವ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರಭಜನ್ ಸಿಂಗ್, ರೋಹಿತ್ ಶರ್ಮಾ ಅವರು ಇನ್ನೆರಡು ವರ್ಷಗಳ ಕಾಲ ಅಂತರಾಷ್ಟ್ರೀಯ ಕ್ರಿಕೆಟ್ ಆಡಲಿದ್ದಾರೆ. ಇತ್ತ ವಿರಾಟ್ ಕೊಹ್ಲಿ ಅವರಿಗಿರುವ ಫಿಟ್‌ನೆಸ್ ಗಮನಿಸಿದರೇ ಇನ್ನ ಐದು ವರ್ಷಗಳ ಕಾಲ ಕ್ರಿಕೆಟ್ ಆಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರೋಹಿರಾಟ್ ಜೋಡಿಯಲ್ಲಿ ಇನ್ನು ಕ್ರಿಕೆಟ್ ಉಳಿದಿದೆ. ಇಬ್ಬರು ಸಾಕಷ್ಟು ಫಿಟ್‌ನೆಸ್ ಹೊಂದಿದ್ದು, ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ನನಗನಿಸುತ್ತದೆ. ಅವರಿಬ್ಬರು ಟೀಂ ಇಂಡಿಯಾ ಪರವಾಗಿ ಆಟ ಮುಂದುವರಿಸಬೇಕು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…