ಕ್ರೀಡೆ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟ್ರಿನಿಡಾಡ್ ನ ಬ್ರಿಯಾನ್‌ ಲಾರಾ ಕ್ರಿಕೆಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್‌ 1) ನಡೆದ ಏಕದಿನ ಕ್ರಿಕೆಟ್‌ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್‌ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, ‘ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾವು ಆಡಿದ ಅತ್ಯುತ್ತಮ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್‌ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.

andolanait

Recent Posts

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

2 mins ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

38 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

42 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

2 hours ago