ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ಗೆ ಐಸಿಸಿ ಭಾರಿ ದಂಡ ವಿಧಿಸಿದೆ.
ಹರ್ಮನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವ ಐಸಿಸಿ (ICC), ಕೌರ್ ಅವರ ಪಂದ್ಯ ಶುಲ್ಕದಲ್ಲಿ ಶೇ.75ರಷ್ಟು ಹಣವನ್ನು ದಂಡವಾಗಿ ಕಡಿತಗೊಳಿಸಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಮನ್‌ಪ್ರೀತ್ ಅಂಪೈರಿಂಗ್ ಅನ್ನು ಪ್ರಶ್ನಿಸಿದ್ದಲ್ಲದೆ, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದು ತಮ್ಮ ಆಕ್ರೋಶ ಹೊರಹಾಕಿದ್ದರು. ಇದೀಗ ಕೌರ್ ವರ್ತನೆಯ ಬಗ್ಗೆ ಮ್ಯಾಚ್ ರೆಫರಿ ಐಸಿಸಿಗೆ ವರದಿ ನೀಡಿದ್ದು, ನಿಯಮದ ಪ್ರಕಾರ ಹರ್ಮನ್‌ಪ್ರೀತ್ ಕೌರ್ ಲೆವೆಲ್ 2 ರಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.
ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವು ಜುಲೈ 22 ರಂದು ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಉಭಯ ತಂಡಗಳ ನಡುವೆ ನಡೆದ ಪಂದ್ಯ ಟೈ ಆಗಿದ್ದು, ನಂತರ ಎರಡೂ ತಂಡವನ್ನು ಜಂಟಿಯಾಗಿ ಸರಣಿ ವಿಜೇತರೆಂದು ಘೋಷಿಸಲಾಯಿತು.
ಪಂದ್ಯದ ವೇಳೆ ಹರ್ಮನ್‌ಪ್ರೀತ್ ಕೌರ್ ವಿರುದ್ಧ ಬಾಂಗ್ಲಾ ತಂಡ ಕ್ಯಾಚ್ ಔಟ್ಗೆ ಮನವಿ ಮಾಡಿತು. ಬಾಂಗ್ಲಾ ತಂಡದ ಮನವಿ ಪುರಸ್ಕರಿಸಿದ ಅಂಪೈರ್, ಔಟೆಂದು ನಿರ್ಣಯ ನೀಡಿದರು. ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನಿಂದ ಕೋಪಗೊಂಡ ಕೌರ್, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದರು. ಇದಾದ ಬಳಿಕ ಅಂಪೈರ್ ತನ್ವೀರ್ ಅಹ್ಮದ್ ಜತೆ ವಾಗ್ವಾದಕ್ಕಿಳಿದರು. ಅಷ್ಟೇ ಅಲ್ಲದೆ ಪಂದ್ಯದ ನಂತರವೂ ಅಂಪೈರ್ ಮತ್ತು ಅವರ ನಿರ್ಧಾರಗಳ ಮೇಲೆ ಪ್ರಶ್ನೆಗಳನ್ನು ಎತ್ತಿದರು.
ಸಿಕ್ಕಿರುವ ಮಾಹಿತಿಯ ಪ್ರಕಾರ, ಹರ್ಮನ್‌ಪ್ರೀತ್ ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದಿದ್ದಕ್ಕಾಗಿ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ಕಡಿತಗೊಳಿಸಲಾಗಿದೆ. ಹಾಗೆಯೇ ಪಂದ್ಯ ಮುಗಿದ ಬಳಿಕ ತೋರಿದ ವರ್ತನೆಗೆ ಪಂದ್ಯ ಶುಲ್ಕದ 25 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ವರದಿಯಾಗಿದೆ.
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ…
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…