Mysore
21
overcast clouds
Light
Dark

ವಿಶೇಷ ರೀತಿಯಲ್ಲಿ ವಿನೇಶ್‌ ಅವರನ್ನು ಸ್ವಾಗತಿಸಲಿದೆ ಹರ್ಯಾಣ ಸರ್ಕಾರ

ಹರ್ಯಾಣ: ಪ್ಯಾರಿಸ್‌ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್‌ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್‌ ಫೋಗಟ್‌ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧ ಹರ್ಯಾಣದ ಸಿಎಂ ನಯಾಬ್‌ ಸಿಂಗ್‌ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್‌ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.