ಹರ್ಯಾಣ: ಪ್ಯಾರಿಸ್ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಹರ್ಯಾಣದ ಸಿಎಂ ನಯಾಬ್ ಸಿಂಗ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…