ನವದೆಹಲಿ : ಪುರುಷರ ಹಾಕಿ ಫೈವ್ಸ್ ಏಶ್ಯಕಪ್ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸುವುದರೊಂದಿಗೆ ಪ್ರಶಸ್ತಿ ಎತ್ತಿ ಹಿಡಿದಿದೆ.
ಒಮಾನ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಉಭಯ ತಂಡಗಳು 4-4ರಿಂದ ಸಮಬಲ ಸಾಧಿಸಿದ್ದವು. ನಂತರ ಪೆನಾಲ್ಟಿ ಶೂಟೌಟ್‌ನಲ್ಲಿ ಪಾಕ್ ತಂಡವನ್ನು ಭಾರತವು 2-0 ಅಂತರದಿಂದ ಸೋಲಿಸಿತು. ಇದರೊಂದಿಗೆ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಭಾರತದ ಪರ ಮುಹಮ್ಮದ್ ರಾಹಿಲ್(19ನೇ, 26ನೇ ನಿಮಿಷ), ಜುಗ್‌ರಾಜ್ ಸಿಂಗ್(7ನೇ ನಿ.)ಹಾಗೂ ಮಣಿಂದರ್ ಸಿಂಗ್(10ನೇ ನಿ.)ಗೋಲು ಗಳಿಸಿದ್ದಾರೆ. ಗುರ್ಜೋತ್ ಸಿಂಗ್ ಹಾಗೂ ಮಣಿಂದರ್ ಶೂಟೌಟ್‌ನಲ್ಲಿ ಗೋಲು ಗಳಿಸಿದರು.
ಹಾಕಿ ಫೈವ್ಸ್ ಏಶ್ಯಕಪ್‌ನಲ್ಲಿ ಗೆಲುವು ಸಾಧಿಸಿದ ಭಾರತದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ಇದು ನಮ್ಮ ಆಟಗಾರರ ಅಚಲ ಸಮರ್ಪಣೆಗೆ ಸಾಕ್ಷಿಯಾಗಿದೆ. ಈ ಗೆಲುವಿನೊಂದಿಗೆ ಮುಂದಿನ ವರ್ಷ ಒಮಾನ್‌ನಲ್ಲಿ ನಡೆಯುವ ಹಾಕಿ ಫೈವ್ಸ್ ವಿಶ್ವಕಪ್‌ಗೆ ಅರ್ಹತೆ ಪಡೆದಿದ್ದೇವೆ. ಹಾಕಿ ಆಟಗಾರರ ದೃಢತೆ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…