ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಭುಜದ ಗಾಯಕ್ಕೆ ಒಳಗಾಗಿದ್ದು, ನಾಳೆಯಿಂದ ಆರಂಭವಾಗುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಶಮಿ ಬದಲಿಗೆ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ತರಬೇತಿ ವೇಳೆ ಶಮಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಸೆಂಬರ್ 14ರಿಂದ ಚಿತ್ತಗಾಂಗ್‌ನಲ್ಲಿ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಶಮಿ ಅಲಭ್ಯರಾಗಬಹುದು ಎಂದು ಮೂಲಗಳು ಹೇಳಿವೆ.
ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್ ಮತ್ತು ಕುಲದೀಪ್ ಸೇನ್ ವೇಗದ ಬೌಲಿಂಗ್ ದಾಳಿ ಸಂಘಟಿಸಲಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…