ಕ್ರೀಡೆ

ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಮೆಲ್ಬೋರ್ನ್​(ಆಸ್ಟ್ರೇಲಿಯಾ)  ಟಿ 20ವಿಶ್ವಕಪ್‌  2022 ಇಂಡಿಯಾ vs  ಜಿಂಬಾಂಬ್ಬೆ  : ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಮದ ಸೆಮೀಸ್​ಗೆ ಎಂಟ್ರಿ ಕೊಟ್ಟಿದೆ.

ಟಿ20 ವಿಶ್ವಕಪ್ 2022ರ  ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಸೆಮೀಸ್​ಗೆ ಎಂಟ್ರಿ ಕೊಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಜಿಂಬಾಬ್ವೆ ತಂಡವು 17.2 ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 115 ರನ್ ಗೆ ಕುಸಿತಕಂಡಿತು. ಈ ಮೂಲಕ ಭಾರತ 71 ರನ್ ಗಳಿಂದ ಜಯ ದಾಖಲಿಸಿತು. ಇದರಿಂದ ಭಾರತ ಗ್ರ್ಯಾಂಡ್​ ಆಗಿ ಸೆಮಿ ಫೈನಲ್​ಗೆ ಎಂಟ್ರಿ ನೀಡಿದೆ. ಇತ್ತ ಜಿಂಬಾಬ್ವೆ ಪರ ಕೇವಲ ಸಿಕಂಧರ್ ರಾಜಾ 34 ರನ್ ಮತ್ತು ರಾಯನ್ 35 ರನ್ ಗಳಿಸಿದರು.

ಇನ್ನು, ಜಿಂಬಾಬ್ವೆ ಆಟಗಾರರಿಗೆ ಯಾವುದೇ ಹಂತದಲ್ಲಿಯೂ ಟಾರ್ಗೆಟ್​ ಕಡೆ ಮುನ್ನುಗ್ಗಲು ಭಾರತದ ಬೌಲರ್​ಗಳು ಅವಕಾಶವನ್ನೇ ನೀಡಲಿಲ್ಲ. ಭಾರತದ ಪರ ಅಶ್ವಿನ್​ 3 ವಿಕೆಟ ಪಡೆದರೆ, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಹಾಗೂ ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖರಾದರು.

andolana

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago