ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ.
“ನಾನು ಯಾವಾಗಲೂ ನನ್ನ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತೇನೆ. ಅವರ ಬೆಂಬಲಕ್ಕಾಗಿ ನಾನು ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂದೆ, ನಾನು 2024 ರ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲಲು ಪ್ರಯತ್ನಿಸುತ್ತೇನೆʼ.
ಎಂದು ಮಾತನಾಡಿವ ಮೂಲಕ 2024ರ ಒಲಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನ ತರುವ ಭರವಸೆಯನ್ನು ನೀಡಿದ್ದಾರೆ.
ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ ದೇಶದ ಮೆಕ್ ನೀಲ್ ಲಾಚ್ಲಾನ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಪುನಿಯಾ ಅವರು ಮುಡಿಗೇರಿಸಿಕೊಂಡರು.