Mysore
29
scattered clouds

Social Media

ಗುರುವಾರ, 13 ಫೆಬ್ರವರಿ 2025
Light
Dark

ರಣಜಿ ಟೂರ್ನಿಯಲ್ಲಿ ಆಡಲಾರೆ ಎಂದ ವಿರಾಟ್‌ ಕೊಹ್ಲಿ

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ.

ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ ತಂಡಗಳ ಪರ ಆಡಲು ಸಾಧ್ಯವಾಗುತ್ತಿಲ್ಲ ಎಂದು ಈ ಇಬ್ಬರು ಆಟಗಾರರು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ವೈದ್ಯಕೀಯ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೊ (ESPNcricinfo) ವರದಿ ಮಾಡಿದೆ.

ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌-ಗವಾಸ್ಕರ್ ಟ್ರೋಫಿ ಸರಣಿಯ ವೇಳೆ ವಿರಾಟ್‌ ಕೊಹ್ಲಿ ಗಾಯಗೊಂಡಿದ್ದರು. ಸಿಡ್ನಿಯಲ್ಲಿ ನಡೆದ ಐದನೇ ಟೆಸ್ಟ್‌ ಪಂದ್ಯದ ವೇಳೆ ಅವರಿಗೆ ಕುತ್ತಿಗೆ ನೋವು ಕಾಣಿಸಿಕೊಂಡಿತ್ತು. ನೋವು ಸಂಪೂರ್ಣ ಶಮನವಾಗಿಲ್ಲದ ಕಾರಣ ಆಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಆಟಗಾರರು ರಾಷ್ಟ್ರೀಯ ತಂಡದ ಆಯ್ಕೆ ಪಟ್ಟಿಯಲ್ಲಿ ಉಳಿಯಬೇಕಾದರೆ ದೇಶಿ ಕ್ರಿಕೆಟ್‌ನಲ್ಲಿ ತಮ್ಮ ರಾಜ್ಯ ತಂಡದ ಪರವಾಗಿ ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ಕಡ್ಡಾಯಗೊಳಿಸಿದೆ. ತಪ್ಪಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.

 

Tags: