ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್ ಟೀಮ್‌ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ.
ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ ತಂಡಗಳ ಪರ ಆಡಲು ಸಾಧ್ಯವಾಗುತ್ತಿಲ್ಲ ಎಂದು ಈ ಇಬ್ಬರು ಆಟಗಾರರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವೈದ್ಯಕೀಯ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೊ (ESPNcricinfo) ವರದಿ ಮಾಡಿದೆ.
ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಸಿಡ್ನಿಯಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ವೇಳೆ ಅವರಿಗೆ ಕುತ್ತಿಗೆ ನೋವು ಕಾಣಿಸಿಕೊಂಡಿತ್ತು. ನೋವು ಸಂಪೂರ್ಣ ಶಮನವಾಗಿಲ್ಲದ ಕಾರಣ ಆಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಆಟಗಾರರು ರಾಷ್ಟ್ರೀಯ ತಂಡದ ಆಯ್ಕೆ ಪಟ್ಟಿಯಲ್ಲಿ ಉಳಿಯಬೇಕಾದರೆ ದೇಶಿ ಕ್ರಿಕೆಟ್‌ನಲ್ಲಿ ತಮ್ಮ ರಾಜ್ಯ ತಂಡದ ಪರವಾಗಿ ಆಡಬೇಕು ಎಂದು ಬಿಸಿಸಿಐ ಇತ್ತೀಚಿಗೆ ಕಡ್ಡಾಯಗೊಳಿಸಿದೆ. ತಪ್ಪಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…
ಭೇರ್ಯ ಮಹೇಶ್ ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…