ದುಬೈ: ಮತ್ತೆ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಕಳೆದ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಸ್ಥಾನವನ್ನು ಕಪ್ತಾನ್ ಮಾಡಿಕೊಂಡ ಕಾರಣ ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮೈದಾನದಲ್ಲೇ ಹಾರ್ದಿಕ್ ವಿರುದ್ಧ ರೋಹಿತ್ ಅಭಿಮಾನಿಗಳು ಗೇಲಿ ಮಾಡಿದ್ದರು.
ಆದರೆ, ಕಳೆದ ವರ್ಷವೇ ನಡೆದ ಐಸಿಸಿ ಟಿ-20 ಟೂರ್ನಿಯಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಡುವ ಮೂಲಕ ಹಾರ್ದಿಕ್ ಭಾರತದ ನೈಜ ಆಲ್‌ರೌಂಡರ್ ಆಟಗಾರ ಎನಿಸಿದ್ದರು.
ಈ ಮೂಲಕ ಅಭಿಮಾನಿಗಳ ಹೃದಯವನ್ನು ನಾನು ಮರಳಿ ಗೆದ್ದಿದ್ದೇನೆ. ಇಲ್ಲಿಂದ ಹಿಂದಕ್ಕೆ ತಿರುಗಿ ನೋಡುವ ಅಗತ್ಯವಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಹೇಳಿಕೆಯನ್ನು ಬಿಸಿಸಿಐ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.





