ಕ್ರೀಡೆ

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.

ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್‌ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.

“ಹೆಲ್ಮೆಟ್ ವಿಚಾರ ಸ್ವಲ್ಪ ಹೆಚ್ಚೇ ಆಗಿತ್ತು. ನಾನು ಹಾಗೆ ಮಾಡಬಾರದಿತ್ತು ಎಂದು ಕೆಲವು ದಿನಗಳ ಬಳಿಕ ಅರ್ಥವಾಗಿತ್ತು. ಅದು ಆ ಕ್ಷಣದಲ್ಲಿ ಸಂಭವಿಸಿ ಹೋಯಿತು. ನಾನು ಹಾಗೆ ಮಾಡಬಾರದಿತ್ತು ಎಂದು ಮತ್ತೆ ನನಗನಿಸಿತು” ಎಂದು ಆವೇಶ್ ಖಾನ್ ಹೇಳಿದ್ದಾರೆ.
ಐಪಿಎಲ್ 2023 ರ ಋತುವಿನಲ್ಲಿ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವೇಶ್ ಅವರು, ತಮ್ಮ ಮಟ್ಟವನ್ನು ತಲುಪದಿದ್ದರೂ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದರು.
andolanait

Recent Posts

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

1 min ago

ಓದುಗರ ಪತ್ರ | ಎಸ್‌ಐಆರ್ ಗೊಂದಲ ಪರಿಹರಿಸಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…

5 mins ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

20 hours ago