ಕ್ರೀಡೆ

i20: ರೋಹಿತ್‌ ಶರ್ಮಾ ದಾಖಲೆ ಸರಿಗಟ್ಟಿದ ಮ್ಯಾಕ್ಸಿ!

ಅಡಿಲೇಡ್​: ಇಲ್ಲಿ ಓವಲ್‌ ಮೈದಾನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ವೆಸ್ಟ್‌ ಇಂಡೀಸ್‌ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿದಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ, ಗ್ಲೆನ್ ಮ್ಯಾಕ್ಸ್​ವೆಲ್ ಅವರ ಬಿರುಸಿನ ಬ್ಯಾಟಿಂಗ್​​ನಿಂದ ಕೇವಲ 50 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 5 ಶತಕ ಸಿಡಿಸಿದ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚುಟುಕು ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಐದು ಶತಕಗಳನ್ನು ಬಾರಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

ಹಿಟ್​ಮ್ಯಾನ್ ರೋಹಿತ್ ಶರ್ಮಾ 143 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅಳಿಸಿ ಹಾಕಿದ್ದಾರೆ. ಕೇವಲ 94 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಕ್ಸಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ವೆಸ್ಟ್‌ ಇಂಡೀಸ್‌ ವಿರುದ್ಧದ ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್​ವೆಲ್ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 120 ರನ್​ ಬಾರಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಪೇರಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 207 ರನ್​ಗಳಿಸಿ 34 ರನ್​ಗಳಿಂದ ಸೋಲನುಭವಿಸಿತು.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago