ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಭಾರತದ ಮಿಸ್ಟ್ರಿ ಬೌಲರ್ ಜಸ್ಪ್ರೀತ್ ಬುಮ್ರಾ ಆಲಂಕರಿಸಿದ್ದಾರೆ.
ಕಳೆದ ವರ್ಷದ ಟೆಸ್ಟ್ ಕ್ರಿಕೆಟ್‌ನಲ್ಲಿ 13 ಪಂದ್ಯಗಳನ್ನು ಆಡಿದ ಬುಮ್ರಾ ಒಟ್ಟು 71 ವಿಕೆಟ್ ಪಡೆಯುವ ಮೂಲಕ ವರ್ಷದ ಅತ್ಯುತ್ತಮ ಬೌಲರ್ ಎನಿಸಿದ್ದಾರೆ. ಇಂಗ್ಲೆಂಡ್ ತಂಡದ ಬೌಲರ್ ಜಸ್ ಅಟ್ಕಿನ್ಸನ್ 11 ಪಂದ್ಯಗಳಲ್ಲಿ 52 ವಿಕೆಟ್ ಪಡೆದು ಇವರ ನಂತರದ ಸ್ಥಾನದಲ್ಲಿದ್ದಾರೆ.
ಬೆನ್ನು ನೋವಿನಿಂದಾಗಿ ದೀರ್ಘ ಅವಧಿಯ ನಂತರ 2023ರ ಕೊನೆಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಮರಳಿದ ಬುಮ್ರಾ 71 ವಿಕೆಟ್ ಪಡೆಯುವ ಮೂಲಕ ರವಿಚಂದ್ರನ್ ಆಶ್ವಿನ್, ಅನಿಲ್ ಕುಂಬ್ಳೆ ಮತ್ತು ಕಪಿಲ್ ದೇವ್ ಅವರ ನಂತರ ಒಂದು ವರ್ಷದಲ್ಲಿ 70ಕ್ಕೂ ಹೆಚ್ಚು ವಿಕೆಟ್ ಪಡೆದವರ ಸಾಲಿನಲ್ಲಿ ಭಾರತದ ನಾಲ್ಕನೇ ಬೌಲರ್ ಎನಿಸಿದ್ದಾರೆ.