Mysore
30
few clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025: ಭದ್ರತೆಗೆ 17 ಸಾವಿರ ಪೊಲೀಸರ ನಿಯೋಜನೆ

ಲಾಹೋರ್‌: ಪಾಕಿಸ್ತಾನದ ಕರಾಚಿ, ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್‌ ಸರ್ಕಾರ ನಿರ್ವಹಿಸಲಿದ್ದು, ಇದಕ್ಕಾಗಿ 12,500 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಲಾಹೋರ್‌ನಲ್ಲಿ ನಡೆಯುವ ಪಂದ್ಯಗಳಿಗೆ 7,600 ಪೊಲೀಸರು ಹಾಗೂ ಕಮಾಂಡೊ ಸಹಿತ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. 4,500 ಅಧಿಕಾರಿಗಳು ಹಾಗೂ ವಿಶೇಷ ಘಟಕದಿಂದ 411 ಸಿಬ್ಬಂದಿ ಭದ್ರತಾ ಹೊಣೆ ಹೊತ್ತಿದ್ದಾರೆ.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಭದ್ರತೆ ಕುರಿತು ಈಗಾಗಲೇ ಆಯುಕ್ತರು ಹಲವು ಬಾರಿ ಸಭೆ ನಡೆಸಿದ್ದು, ಇನ್ನೂ ಹೆಚ್ಚುವರಿಯಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿ ಚಾಂಪಿಯನ್ಸ್‌ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆ. ಭಾರತ ಮಾತ್ರ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

Tags: