ಲಾಹೋರ್: ಪಾಕಿಸ್ತಾನದ ಕರಾಚಿ, ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್ ಸರ್ಕಾರ ನಿರ್ವಹಿಸಲಿದ್ದು, ಇದಕ್ಕಾಗಿ 12,500 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಲಾಹೋರ್‌ನಲ್ಲಿ ನಡೆಯುವ ಪಂದ್ಯಗಳಿಗೆ 7,600 ಪೊಲೀಸರು ಹಾಗೂ ಕಮಾಂಡೊ ಸಹಿತ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. 4,500 ಅಧಿಕಾರಿಗಳು ಹಾಗೂ ವಿಶೇಷ ಘಟಕದಿಂದ 411 ಸಿಬ್ಬಂದಿ ಭದ್ರತಾ ಹೊಣೆ ಹೊತ್ತಿದ್ದಾರೆ.
ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಭದ್ರತೆ ಕುರಿತು ಈಗಾಗಲೇ ಆಯುಕ್ತರು ಹಲವು ಬಾರಿ ಸಭೆ ನಡೆಸಿದ್ದು, ಇನ್ನೂ ಹೆಚ್ಚುವರಿಯಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆ. ಭಾರತ ಮಾತ್ರ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…